NDA

ಹಣದುಬ್ಬರ, ವಿರೋಧ ಪಕ್ಷಗಳ ಒಗ್ಗಟ್ಟಿನ ಹೊರತಾಗಿಯೂ 2024ರಲ್ಲಿ ಮೋದಿ ಮತ್ತೆ ಅಧಿಕಾರಕ್ಕೆ: ವರದಿ
ವಿರೋಧ ಪಕ್ಷಗಳ ಭಾರೀ ವಿರೋಧವಿದ್ದರೂ ಕೂಡ ಉತ್ತರದ ರಾಜ್ಯಗಳಲ್ಲಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇನ್ನೂ ಅಧಿಕಾರಕ್ಕೆ ಮರಳುವ ಸಾಧ್ಯತೆಯಿದೆ ಎಂದು ವರದಿಯ ವಿಶ್ಲೇಷಣೆಯೊಂದು ಹೇಳಿದೆ.

ವಿಪಕ್ಷಗಳ ಮೈತ್ರಿ INDIA ಬಲದಿಂದ ಸರ್ಕಾರ ಆತಂಕಕ್ಕೆ ಒಳಗಾಗಿದೆ: ಮಲ್ಲಿಕಾರ್ಜುನ ಖರ್ಗೆ
ಪ್ರತಿಪಕ್ಷಗಳ ಮೈತ್ರಿಕೂಟದ ಬಲವು ಸರ್ಕಾರವನ್ನು ನಿರುತ್ಸಾಹಗೊಳಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಡಿ ಬರುವ ಸಂಸ್ಥೆಗಳ ಹೆಚ್ಚು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಯಿರುವುದರಿಂದ INDIA ಮೈತ್ರಿಕೂಟಗಳು ದ್ವೇಷದ ರಾಜಕೀಯವನ್ನು ಎದುರಿಸಲು ಸನ್ನದ್ಧವಾಗಿರಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿ ಯಾವಾಗ ಬೇಕಾದರೂ ಲೋಕಸಭೆ ಚುನಾವಣೆ ನಡೆಯಬಹುದು: ನಿತೀಶ್ ಕುಮಾರ್
ವಿಪಕ್ಷಗಳ ಒಗ್ಗಟ್ಟಿನಿಂದಾಗಿ ಬಿಜೆಪಿ ಹೆಚ್ಚು ನಷ್ಟ ಅನುಭವಿಸುವ ಭೀತಿಯಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆಯು ಯಾವಾಗ ಬೇಕಾದರೂ ನಡೆಯಬಹುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಹೇಳಿದ್ದಾರೆ.

ಯುಪಿಎ ಕಾಲದಲ್ಲಿ 'ಬಿಜಿಲಿ ಆಯೇಗಿ, ಟಾಯ್ಲೆಟ್ ಬನೇಗಾ ಎನ್ನುತ್ತಿದ್ದರು; ಈಗ ಹೋ ಗಯಾ' ಎನ್ನುತ್ತಿದ್ದಾರೆ: ನಿರ್ಮಲಾ ಸೀತಾರಾಮನ್
ಯುಪಿಎ ಸರಕಾರ ಯೋಜನೆಗಳನ್ನು ಆರಂಭಿಸುವುದಾಗಿ ಕೇವಲ ಭರವಸೆಗಳನ್ನು ಮಾತ್ರ ನೀಡಿದ್ದು, ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಆ ಭರವಸೆಗಳನ್ನು ಈಡೇರಿಸಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಿಜೆಪಿಗೆ ಮಿತ್ರಪಕ್ಷಗಳು ಮುಖ್ಯ: ಉದ್ಧವ್ ಠಾಕ್ರೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ
ಮಹಾರಾಷ್ಟ್ರ ಮತ್ತು ಗೋವಾದ ಎನ್‌ಡಿಎ ಸಂಸದರ ಸಭೆಯನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಮಣಿಪುರ ಹಿಂಸಾಚಾರ: NDA ಮೈತ್ರಿಕೂಟ ತೊರೆದ KPA, ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂದಕ್ಕೆ
ಮಣಿಪುರ ಹಿಂಸಾಚಾರದ ಬೆಳವಣಿಗೆ ಹಿನ್ನಲೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ ಎನ್ ಡಿಎ ಪಾಲುದಾರ ಪಕ್ಷ ಕುಕಿ ಪೀಪಲ್ಸ್ ಅಲೈಯನ್ಸ್ (ಕೆಪಿಎ) ಭಾನುವಾರ ಮಣಿಪುರದಲ್ಲಿ ಎನ್ ಬಿರೇನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.

ನಿತೀಶ್ ಕುಮಾರ್ ಯಾವಾಗ ಬೇಕಾದರೂ ಎನ್ ಡಿಎಗೆ ಮರಳಬಹುದು: ರಾಮದಾಸ್ ಅಠವಳೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವಾಗ ಬೇಕಾದರೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ(ಎನ್‌ಡಿಎ) ಮರಳಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್...

ದೆಹಲಿ ಸುಗ್ರೀವಾಜ್ಞೆ ಮಸೂದೆ: ಎನ್‌ಡಿಎಗೆ ಬೆಂಬಲ ನೀಡಲು ವೈಎಸ್‌ಆರ್ ಕಾಂಗ್ರೆಸ್ ನಿರ್ಧಾರ
ಎನ್‌ಡಿಎಯಿಂದ ಅಂತರ ಕಾಯ್ದುಕೊಂಡಿದ್ದ ವೈಆರ್‌ಎಸ್ ಕಾಂಗ್ರೆಸ್ ಪಕ್ಷ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಎನ್‌ಡಿಎನೂ ಇಲ್ಲ, ಯುಪಿಎನೂ ಇಲ್ಲ, ಸ್ವತಂತ್ರವಾಗಿ ಹೋರಾಡಿ ಪ್ರಾದೇಶಿಕ ಪಕ್ಷ ಉಳಿಸುತ್ತೇವೆ: ಹೆಚ್ ಡಿ ದೇವೇಗೌಡ
2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ, ಇದಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು ದೇವೇಗೌಡರು ಮತ್ತು ಬಿಜೆಪಿ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂಬ ಊಹಾಪೋಹ ಇಷ್ಟು ದಿನ ಕೇಳಿಬರುತ್ತಿತ್ತು.

