ರಾಜ್ಯನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ, ಬಿಜೆಪಿ ಕೆರಳುವುದು ಖಚಿತ!
ವಿದ್ಯಾರ್ಥಿಗಳಿಗೆ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬುಧವಾರ ಹೇಳಿದ್ದಾರೆ.