ರಾಜ್ಯಾದ್ಯಂತ ವ್ಯಾಪಕ ಮಳೆ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಭಾನುವಾರ ನೀರಿನ ಮಟ್ಟ 8.5 ಮೀಟರ್ನಷ್ಟು ಏರಿಕೆಯಾಗಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.