New Cases
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಂದ ಶೇ.75 ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಸರ್ಕಾರ
ಕರ್ನಾಟಕ, ಮಹಾರಾಷ್ಟ್ರ, ಯುಪಿ, ದೆಹಲಿ ಸೇರಿದಂತೆ ಮತ್ತಿತರ 10 ರಾಜ್ಯಗಳಿಂದ ಶೇ. 75 ರಷ್ಟು ಅಂದರೆ, 3, 14,835 ಹೊಸ ಪ್ರಕರಣಗಳು ಒಂದೇ ದಿನ ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 81 ಬಲಿ, ಬೆಂಗಳೂರಿನಲ್ಲಿ 12793 ಸೇರಿ 19067 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 19067 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,61,065ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಮಹಾರಾಷ್ಟ್ರದಲ್ಲಿ 61,695 ಹೊಸ ಪ್ರಕರಣ, 349 ಸಾವು
ಮಹಾರಾಷ್ಟ್ರದಲ್ಲಿ ಗುರುವಾರ 61,695 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 36,39,855 ಕ್ಕೆ ಏರಿಕೆಯಾಗಿದೆ. 349 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಮೃತಪಟ್ಟವರ ಸಂಖ್ಯೆ 59,153ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನ 17, 282 ಹೊಸ ಕೋವಿಡ್-19 ಪ್ರಕರಣ, 100 ಸಾವು
ಬುಧವಾರ ದೆಹಲಿಯಲ್ಲಿ 17,282 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಸಾಂಕ್ರಾಮಿಕ ಪ್ರಾರಂಭದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಅತ್ಯಧಿಕ ಹೆಚ್ಚಿನ ಸಂಖ್ಯೆಯ ಸೋಂಕು ಪ್ರಕರಣಗಳು ಕಂಡುಬಂದಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಹೆಚ್ಚಳ: 1,68,912 ಹೊಸ ಕೇಸು ಪತ್ತೆ, 904 ಮಂದಿ ಸಾವು
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎರಡನೇ ಅಲೆ ಬಂದ ನಂತರ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಕಠಿಣವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1 ಲಕ್ಷದ 68 ಸಾವಿರದ 912 ಸೋಂಕಿತರು ಪತ್ತೆಯಾಗಿದ್ದಾರೆ.

ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ 63,294 ಪ್ರಕರಣ ದಾಖಲು
ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 63,294 ಹೊಸ ಕೊರೋನಾವೈರಸ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಕೋವಿಡ್-19: ರಾಜ್ಯದಲ್ಲಿಂದು 1236 ಹೊಸ ಪ್ರಕರಣಗಳು ಪತ್ತೆ, 1497 ಸೋಂಕಿತರು ಗುಣಮುಖ, 10 ಸಾವು
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು ಹೊಸದಾಗಿ 1236 ಪ್ರಕರಣಗಳು ದೃಢಪಟ್ಟಿವೆ. 1497 ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ.

ಕೋವಿಡ್-19: ರಾಜ್ಯದಲ್ಲಿಂದು 1185 ಹೊಸ ಪ್ರಕರಣಗಳು ಪತ್ತೆ, 1594 ಸೋಂಕಿತರು ಗುಣಮುಖ, 11 ಸಾವು
ರಾಜ್ಯದಲ್ಲಿಂದು ನಿನ್ನೆಗಿಂತ ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. 1185 ಹೊಸ ಪ್ರಕರಣಗಳು ದೃಢಪಟ್ಟಿದ್ದು, 1594 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೋವಿಡ್-19: ಬೆಂಗಳೂರಿನಲ್ಲಿ 369 ಸೇರಿ ರಾಜ್ಯದಲ್ಲಿಂದು 830 ಹೊಸ ಪ್ರಕರಣಗಳು ಪತ್ತೆ, 2164 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಇಂದು ಅತಿ ಕಡಿಮೆ ಎನ್ನುವಂತೆ 830 ಕೊರೋನಾ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ.

