Newdelhi

ದೇಶದ ಆರ್ಥಿಕತೆ ಮತ್ತೆ ಪುಟಿದೇಳಲಿದೆ- ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ತೀವ್ರ ಹೊಡೆತಕ್ಕೆ ಸಿಲುಕಿರುವ ದೇಶದ ಆರ್ಥಿಕತೆ ಶೀಘ್ರದಲ್ಲಿ ಮತ್ತೆ ಪುಟಿದೇಳಲಿದೆ ಎಂದು ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮಿತ್ ಪಂಘಾಲ್ ವಿಶ್ವದ ನಂ.1 ಬಾಕ್ಸರ್
ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವ ಚಾಂಪಿಯನ್ ಷಿಪ್ ಬೆಳ್ಳಿ ಪದಕ ವಿಜೇತ ಅಮಿತ್ ಪಂಘಾಲ್ ಅಮೆಚೂರ್ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ) ನೂತನವಾಗಿ ಬಿಡುಗಡೆ ಮಾಡಿದ ವಿಶ್ವ ರಾಂಕಿಂಗ್ ನ 52 ಕೆ. ಜಿ ವಿಭಾಗದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಆಧಾರ್, ಪ್ಯಾನ್ ಕಾರ್ಡ್ ಜೋಡಣೆ ಗಡುವು 2021 ಮಾರ್ಚ್ 31ಕ್ಕೆ ವಿಸ್ತರಣೆ
ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಜೋಡಣೆ ಮಾಡುವ ಗಡುವನ್ನು ಕೊನೆಯ ದಿನವನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೂ ಸರ್ಕಾರ ವಿಸ್ತರಿಸಿದೆ.

ವೆಂಟಿಲೇಟರ್ ಖರೀದಿಯಲ್ಲಿ ಹಗರಣದ ವಾಸನೆ: ಕಾಂಗ್ರೆಸ್ ಆರೋಪ
ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯ ಮಧ್ಯೆ ಸರ್ಕಾರ ವೆಂಟಿಲೇಟರ್‌ಗಳ ಖರೀದಿಗೆ ಸಂಬಂಧಿಸಿದ ಹಗರಣದಲ್ಲಿ ತೊಡಗಿದ್ದು, ದೇಶದ ಜನರನ್ನು ಮರುಳು ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಆನ್ ಲೈನ್ ವಿಚಾರಣೆಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್
ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ನಡುವೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಹಾಗೂ ಇ- ನೋಂದಾಯಿತ ಕೇಸ್ ಗಳಿಗಾಗಿ ಹೊಸ ಮಾರ್ಗಸೂಚಿಗಳನ್ನು ಸುಪ್ರೀಂಕೋರ್ಟ್ ಪ್ರಕಟಿಸಿದೆ.

ಕೋವಿಡ್-19 ಸೋಂಕಿನಿಂದ 1984 ಸಿಖ್ ವಿರೋಧಿ ಹಿಂಸಾಚಾರದ ಆರೋಪಿ ಸಾವು
1984ರ ಸಿಖ್ ವಿರೋಧಿ ಹಿಂಸಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಶಾಸಕರೊಬ್ಬರು ಕೋವಿಡ್-19 ಸೋಂಕಿನಿಂದ ರಾಷ್ಟ್ರ ರಾಜಧಾನಿಯ ಆಸ್ಪತ್ರೆಯೊಂದರಲ್ಲಿ ಇಂದು ಸಾವನ್ನಪ್ಪಿದ್ದಾರೆ.

ಭಯಾನಕ ವಿಡಿಯೋ! ಕುಡಿದ ಮತ್ತಿನಲ್ಲಿ ಮಹಿಳೆಗೆ ಕಾರು ಗುದ್ದಿಸಿದ ಚಾಲಕ, ಮುಂದೇನಾಯ್ತು?ನೋಡಿ
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ 55 ವರ್ಷದ ಮಹಿಳೆ ಮೇಲೆ ಕಾರು ಹತ್ತಿಸಿದ್ದರಿಂದ ಆಕೆ ಗಾಯಗೊಂಡಿರುವ ಘಟನೆ ನವದೆಹಲಿಯ ಚಿಲ್ಲಾ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆಶಾದಾಯಕ ಬೆಳವಣಿಗೆ: ದೇಶದಲ್ಲಿ ಕೋವಿಡ್-19 ನಿಂದ ಗುಣಮುಖರಾದವರ ಪ್ರಮಾಣ ಶೇ.60.73ಕ್ಕೆ ಏರಿಕೆ
ಆರಂಭದಲ್ಲಿಯೇ ಸೋಂಕು ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸಾ ನಿರ್ವಹಣೆಯಿಂದಾಗಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಗುಣಮುಖರಾದವರ ಪ್ರಮಾಣ ಶೇ.60ನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ರಾಜ್ಯದ ಆಶಾ ಕಾರ್ಯಕರ್ತೆಯರ ಪಾತ್ರವನ್ನು ಶ್ಲಾಘಿಸಿದ ಕೇಂದ್ರ ಆರೋಗ್ಯ ಸಚಿವಾಲಯ!
ಕೋವಿಡ್-19 ಎದುರಿಸುವಲ್ಲಿ ರಾಜ್ಯದ ಆಶಾ ಕಾರ್ಯಕರ್ತೆಯರು ಪ್ರಮುಖ ಆಧಾರ ಸ್ತಂಭವಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಮುಕ್ತ ಕಂಠದಿಂದ ಶ್ಲಾಘಿಸಿದೆ.

