NGT

ಒತ್ತುವರಿ ತೆರವುಗೊಳಿಸಲು ನೋಟಿಸ್ ನೀಡುವ ಅಗತ್ಯವಿಲ್ಲ: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸಮಿತಿಯ ಸದಸ್ಯರು, ಜಲಮೂಲಗಳ ಮೇಲೆ ಮತ್ತು ಬಫರ್ ವಲಯಗಳಲ್ಲಿ ಒತ್ತುವರಿ ಮಾಡಿಕೊಂಡಿರುವ ಆಸ್ತಿಗಳನ್ನು ತೆರವುಗೊಳಿಸಲು ನೋಟಿಸ್ ನೀಡುವ ಅಗತ್ಯವಿಲ್ಲ. ಆದಾಗ್ಯೂ ವ್ಯಕ್ತಿಗೆ ತಿಳಿಸಲು ಕಾನೂನು ಪ್ರಕ್ರಿಯೆಯ ಭಾಗವಾಗಿ ಮಾತ್ರ ನೋಟಿಸ್‌ಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೆರೆಗಳ ರಕ್ಷಿಸಲು ಅಧಿಕಾರಿಗಳ ನಿರ್ಲಕ್ಷ್ಯ: ಎನ್'ಜಿಟಿ ಮೊರೆ ಹೋದ ನಾಗರೀಕರು, ಹೋರಾಟಗಾರರು
ಬೆಂಗಳೂರಿನ ಜಲಮೂಲವಾಗಿರುವ ಕೆರೆಗಳ ರಕ್ಷಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಇದರಿಂದ ಬೇಸತ್ತಿರುವ ನಾಗರೀಕರು ಹಾಗೂ ಹೋರಾಟಗಾರರು ಅಳಿವಿನಂಚಿನಲ್ಲಿರುವ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ರಕ್ಷಣೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್'ಜಿಟಿ) ಮೊರೆ ಹೋಗಿದ್ದಾರೆ.

ಮೇಕೆದಾಟು ಯೋಜನೆಯಲ್ಲಿ ಕರ್ನಾಟಕಕ್ಕೆ ಮಹತ್ವದ ಮುನ್ನಡೆ!
ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ.

ಮೇಕೆದಾಟು ಯೋಜನೆ ಪರಿಶೀಲನೆಗೆ ಜಂಟಿ ಸಮಿತಿ ರಚನೆ; ಎನ್ ಜಿಟಿ ಆದೇಶ ಪ್ರಶ್ನಿಸಿ ಮೇಲ್ಮನವಿ: ಬೊಮ್ಮಾಯಿ
ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಗೆ ಜಂಟಿ ಸಮಿತಿ ರಚಿಸುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದಕ್ಷಿಣ ಶಾಖೆಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.

ಮೇಕೆದಾಟು ಬಿಕ್ಕಟ್ಟು: ಕಾನೂನು ತಜ್ಞರ ಸಲಹೆ ಪಡೆಯಲು ಸಿಎಂ ಯಡಿಯೂರಪ್ಪ ನಿರ್ಧಾರ
ಮೇಕೆದಾಟು ಯೋಜನೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ದಿನಪತ್ರಿಕೆ ವರದಿ ಆಧರಿಸಿ ರಚನೆ ಮಾಡಿರುವ ಸಮಿತಿ ವಿರುದ್ಧ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಕಾವೇರಿ ವಿವಾದ: ಮೇಕೆದಾಟುವಿನಲ್ಲಿ ಅಕ್ರಮ ನಿರ್ಮಾಣ ಆರೋಪದ ತನಿಖೆಗೆ ಎನ್ ಜಿಟಿ ಸಮಿತಿ ರಚನೆ
ಮೇಕೆದಾಟುವಿನಲ್ಲಿ ಅನಧಿಕೃತ ನಿರ್ಮಾಣ ಚಟುವಟಿಕೆಗಳ ಆರೋಪ ಪರಿಶೀಲಿಸಲು ಜಂಟಿ ಸಮಿತಿಯೊಂದನ್ನು ರಾಷ್ಟ್ರೀಯಹಸಿರು ನ್ಯಾಯಾಧೀಕರಣ ನೇಮಿಸಿದೆ. ಅಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರ ಪ್ರಸ್ತಾಪಿಸಿತ್ತು.

ಕಸ್ತೂರಿ ರಂಗನ್ ವರದಿ ಬಗ್ಗೆ ಆತಂಕ ಬೇಡ, 1533 ಗ್ರಾಮದ ಜನರ ಹಿತಾಸಕ್ತಿ ಕಾಪಾಡಲು ಸರಕಾರ ಬದ್ಧ: ಸಚಿವ ಸುರೇಶ್‌ಕುಮಾರ್
ಡಾ. ಕೆ. ಕಸ್ತೂರಿ ರಂಗನ್ ವರದಿಯನ್ವಯ ರಾಜ್ಯದಲ್ಲಿನ ಪಶ್ಚಿಮಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೊಳಪಡುತ್ತಿರುವ ೧೫೩೩ ಗ್ರಾಮಗಳ ಜನರ ಹಿತಾಸಕ್ತಿ ಕಾಪಾಡಲು ಸರಕಾರ ಬದ್ಧವಾಗಿದ್ದು, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಪಟಾಕಿ ಮಾರಾಟ-ಬಳಕೆ ನಿಷೇಧ ವಿಸ್ತರಣೆ: ಹಸಿರು ನ್ಯಾಯಪೀಠ ಆದೇಶ
ಎಲ್ಲ ಬಗೆಯ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ದೆಹಲಿಯಲ್ಲಿ ನ.30 ರವರೆಗೆ ಪಟಾಕಿ ಬಳಕೆ-ಮಾರಾಟಕ್ಕೆ ಎನ್ ಜಿಟಿ ನಿಷೇಧ: ಮಾಲಿನ್ಯ ಹೆಚ್ಚಿರುವ ನಗರಗಳಿಗೂ ಇದು ಅನ್ವಯ
ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೋನ ಸೋಂಕು ಹೆಚ್ಚಳ ಮತ್ತು ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಇಂದು ಮಧ್ಯರಾತ್ರಿಯಿಂದ ಇದೇ 30 ರವರೆಗೆ ದೆಹಲಿ-ಎನ್ಸಿಆರ್ನಲ್ಲಿ ಎಲ್ಲಾ ರೀತಿಯ ಪಟಾಕಿ ಮಾರಾಟ ಅಥವಾ ಬಳಸದಂತೆ ನಿಷೇಧಿಸಿದೆ.

