NHAI

ಬೆಂಗಳೂರು: ಹೆಚ್ಚುವರಿ ಶುಲ್ಕ ಸಂಗ್ರಹಿಸಿದ ಎನ್ ಹೆಚ್ ಎಐ, ಟೋಲ್ ಸಂಸ್ಥೆಗೆ ದಂಡ
ಬೆಂಗಳೂರು ಮತ್ತು ತುಮಕೂರು ನಡುವೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪ್ರಯಾಣಕ್ಕೆ ನಿಗದಿಪಡಿಸಿದ ಶುಲ್ಕಕ್ಕಿಂತ 5 ರೂಪಾಯಿ ಹೆಚ್ಚು ಶುಲ್ಕ ಸಂಗ್ರಹಿಸಿದ್ದಕ್ಕಾಗಿ ಬೆಂಗಳೂರು ಮೊದಲ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು JAS ಟೋಲ್ ರೋಡ್ ಕಂಪನಿ ಲಿಮಿಟೆಡ್ ನ್ನು ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ತೆರವಿಗೆ NHAI ಚಿಂತನೆ
ದುಬಾರಿ ಟೋಲ್ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ: ಆದೇಶ ವಾಪಸ್ ಪಡೆದ ಹೆದ್ದಾರಿ ಪ್ರಾಧಿಕಾರ
ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳವನ್ನು ತಡೆಹಿಡಿಯಲಾಗಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಸೋಷಿಯಲ್ ಮೀಡಿಯಾ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ರಿಂಗ್ ರೋಡ್ ಯೋಜನೆ ಕಾಮಗಾರಿ ಜಿಆರ್ ಇನ್‌ಫ್ರಾ ಲಿಮಿಟೆಡ್ ಪಾಲು!
ಬೆಳಗಾವಿ ನಗರಕ್ಕೆ 4/6 ಲೇನ್ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (ಎನ್‌ಎಚ್‌ಎಐ) ರಿಂಗ್ ರೋಡ್ ಯೋಜನೆಯನ್ನು ಜಿಆರ್ ಇನ್‌ಫ್ರಾಪ್ರಾಜೆಕ್ಟ್ಸ್ ಕಂಪನಿಗೆ ನೀಡಲಾಗಿದ್ದು, ನಿಗದಿತ ದಿನಾಂಕದಿಂದ 912 ದಿನಗಳಲ್ಲಿ ಯೋಜನೆಯ ಕೆಲಸವನ್ನು ಪೂರ್ಣಗೊಳಿಸಲು ಗಡುವು ನೀಡಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಶುಲ್ಕದಲ್ಲಿ ಮತ್ತೆ ಹೆಚ್ಚಳ: ಏಪ್ರಿಲ್ 1 ರಿಂದ ಹೊಸ ದರ ಜಾರಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಆರಂಭ ಆದಾಗಿನಿಂದ ಟೋಲ್ ವಿಚಾರವಾಗಿ ವಾಹನ ಸವಾರರು ಹಾಗೂ ಟೋಲ್ ಸಿಬ್ಬಂದಿ ನಡುವೆ ವಾಕ್ಸಮರಗಳು ನಡೆಯುತ್ತಲೇ ಇವೆ. ಇದರ ನಡುವಲ್ಲೇ ಟೋಲ್ ಸಂಗ್ರಹ ಆರಂಭವಾಗಿ ಕೇವಲ 15 ದಿನಗಳಲ್ಲೇ ಎಕ್ಸ್‌ಪ್ರೆಸ್ ವೇನಲ್ಲಿ ಟೋಲ್ ಶುಲ್ಕವನ್ನು ಮತ್ತೆ ಹೆಚ್ಚಳ ಮಾಡಲಾಗಿದೆ.

ಇ-ವೇ ಸರ್ವಿಸ್ ರಸ್ತೆಯನ್ನು ಪೂರ್ಣಗೊಳಿಸಲಾಗುವುದು: ರಾಷ್ಟ್ರೀಯ ಹೆದ್ದಾರಿ ರಸ್ತೆ ಪ್ರಾಧಿಕಾರ
ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಒಂದು ವಾರದೊಳಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಾಮನಗರ ಬಳಿ ಜಲಾವೃತಗೊಂಡ ನಂತರ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಂಗಬಸವನ ದೊಡ್ಡಿ ಸೇರಿದಂತೆ ಎಕ್ಸ್‌ಪ್ರೆಸ್‌ವೇಯ ಪರಿಶೀಲನೆ ನಡೆಸಿತು.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಜಲಾವೃತ ಸಮಸ್ಯೆಯನ್ನು ಎನ್'ಹೆಚ್ಎಐ ಪರಿಹರಿಸುತ್ತದೆ: ಸಿಎಂ ಬೊಮ್ಮಾಯಿ
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಅಂಡರ್‌ಪಾಸ್ ಜಲಾವೃತಗೊಂಡಿರುವ ಸಮಸ್ಯೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪರಿಹರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಟ್ರಾಫಿಕ್ ಜಾಮ್ ಸಮಸ್ಯೆ: ಕೆಂಗೇರಿ ಜಂಕ್ಷನ್ ವಿಸ್ತರಣೆಗೆ NHAI ಗಂಭೀರ ಚಿಂತನೆ
ಮೈಸೂರಿನಿಂದ ಹೊಸದಾಗಿ ಉದ್ಘಾಟನೆಗೊಂಡ 10 ಪಥಗಳ ಎಕ್ಸ್‌ಪ್ರೆಸ್‌ವೇಯಲ್ಲಿ ಗಂಟೆಗೆ 100 ಕಿಮೀ ವೇಗದಲ್ಲಿ ಸಂಚರಿಸುವ ವಾಹನ ಸವಾರರು ಕೆಂಗೇರಿ ಜಂಕ್ಷನ್‌ಗೆ ತಲುಪಿದಾಗ ತಮ್ಮ ವಾಹನಗಳ ವೇಗವನ್ನು ಟ್ರಾಫಿಕ್ ಜಾಮ್ ನಿಂದಾಗಿ ಗಂಟೆಗೆ 10 ಕಿಮೀಗೆ ಇಳಿಸಲು ಒತ್ತಾಯಿಸಲ್ಪಡುತ್ತಿದ್ದಾರೆ.

ಬೆಂಗಳೂರು: ಸಾದಹಳ್ಳಿ ಜಂಕ್ಷನ್ ಓವರ್ ಪಾಸ್ ಅಂತಿಮಗೊಳಿಸಿದ ಎನ್ ಹೆಚ್ಎಐ, ಏರ್ ಪೋರ್ಟ್ ಮೇಟ್ರೋ ಮಾರ್ಗದ ಮೇಲೆ ಪರಿಣಾಮ ಇಲ್ಲ
ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾದಹಳ್ಳಿ ಜಂಕ್ಷನ್ ನಲ್ಲಿ ಕೆಳಸೇತುವೆ ನಿರ್ಮಿಸುವ ಯೋಜನೆಯನ್ನು ಬದಲಾವಣೆ ಮಾಡಲಾಗಿದ್ದು, ಎನ್ ಹೆಚ್ಎಐ ಮೇಲ್ಸೇತುವೆ ನಿರ್ಮಿಸುವ ಯೋಜನೆಯನ್ನು ಅಂತಿಮಗೊಳಿಸಿದೆ.

