NIA

ಕೋಲಾರದಲ್ಲಿ ಎನ್ಐಎ ದಾಳಿ, ಬಂಧಿತ ಸಲೀಂ ಖಾನ್, ಪಾಷಾ ಮನೆಯಲ್ಲಿ ಶೋಧ
ಶಂಕಿತ ಉಗ್ರ ಮೆಹಬೂಬ್ ಪಾಷಾನೊಂದಿಗೆ ನಂಟು ಹೊಂದಿದೆ ಆರೋಪದ ಮೇಲೆ ಇತ್ತೀಚಿಗೆ ತಮಿಳುನಾಡಿನಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಗಾಗಿದ್ದ ಸಲೀಂ ಖಾನ್ ಹಾಗೂ ಪಾಷಾ ಮನೆ ಮೇಲೆ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳ ಕುಟುಂಬಸ್ಥರಿಗೆ ಹೇಳಿಕೆ ಪಡೆದಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣ ಎನ್ ಐಎಗೆ ವರ್ಗಾವಣೆ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಶರದ್ ಕಿಡಿ
ಭೀಮಾ ಕೊರೆಗಾಂವ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆ ಮಾಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕಿಡಿಕಾರಿದ್ದಾರೆ.

ಭೀಮಾ-ಕೋರೆಗಾಂವ್ ಪ್ರಕರಣ ಎನ್ಐಎಗೆ ವರ್ಗಾವಣೆ: ಮೋದಿ, ಶಾ ವಿರುದ್ಧ ರಾಹುಲ್ ವಾಗ್ದಾಳಿ
ಭೀಮಾ-ಕೊರೆಗಾಂವ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ) ವರ್ಗಾಯಿಸಿದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಶನಿವಾರ ಭೀಮಾ-ಕೋರೆಗಾಂವ್ ಪ್ರತಿರೋಧದ ಸಂಕೇತವಾಗಿದೆ ಮತ್ತು ಸರ್ಕಾರದ ಪಾತ್ರವನ್ನು ಎಂದಿಗೂ ಅಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ದೇವೀಂದರ್ ಸಿಂಗ್ ಮನೆ ಮೇಲೆ ಎನ್ಐಎ ದಾಳಿ
ಭಯೋತ್ಪಾದನೆ ಚಟುವಟಿಕೆಗಳಲ್ಲಿ ಮಾಜಿ ಪೊಲೀಸ್ ಅಧಿಕಾರಿ ದೇವೀಂದರ್ ಸಿಂಗ್ ಪಾತ್ರದ ಬಗ್ಗೆ ತನಿಖೆ ಮುಂದುವರೆದಿದ್ದು, ಈ ನಡುವಲ್ಲೇ ದೇವೀಂದರ್ ಸಿಂಗ್ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.

ಉಗ್ರರ ಜೊತೆ ಸಂಪರ್ಕ ಆರೋಪದ ಮೇಲೆ ಡಿಎಸ್ಪಿ ದೇವಿಂದರ್ ಸಿಂಗ್ ಬಂಧನ: ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ
ಮೂವರು ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಜಮ್ಮು-ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಿಚಾರಣೆ ನಡೆಸಲಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಬೆಂಗಳೂರು: ನಗರದಲ್ಲಿ ಅಡಗಿ ಕುಳಿತಿದ್ದ ಮೂವರು ಶಂಕಿತ ಉಗ್ರರ ಬಂಧನ
ತಮಿಳುನಾಡು ರಾಜ್ಯದಲ್ಲಿ ಹಿಂದೂ ಸಂಘಟನೆಯ ಮುಖಂಡನ ಹತ್ಯೆಗೈದು ನಗರದ ಪಿ,ಜಿಯೊಂದರಲ್ಲಿ ಆಶ್ರಯ ಪಡೆದಿದ್ದ ಮೂವರು ಶಂಕಿತ ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ.

ಬೆಂಗಳೂರು ಮಾಡ್ಯೂಲ್ ಪ್ರಕರಣ: ಜೆಎಂಬಿ ಉಗ್ರ ಮೊಸರೂಫ್ ಹುಸೇನ್ ಬಂಧಿಸಿದ ಎನ್ಐಎ
ಬೆಂಗಳೂರು ಮಾಡ್ಯೂಲ್ ಪ್ರಕರಣದ ಪ್ರಮುಖ ಆರೋಪಿ (ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ)ಜೆಎಂಬಿ ಉಗ್ರ ಮೊಸರೂಫ್ ಹುಸೇನ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಬಾಂಗ್ಲಾ ಉಗ್ರರು! ಎನ್ಐಎನಿಂದ ಶಂಕಿತರ ಪಿಜಿ ತಪಾಸಣೆ
ಬಾಂಗ್ಲಾದೇಶದ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಕಾರ್ಯಕರ್ತರಿಗೆ ಬೆಂಗಳೂರು ಸುರಕ್ಷಿತ ತಾಣವಾಗಿ ಹೊರಹೊಮ್ಮುತ್ತಿದೆ - ಜಮಾಅತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಮತ್ತು ಅನ್ಸರುಲ್ಲಾ ಬಾಂಗ್ಲಾ ಟೀಂ (ಎಬಿಟಿ) ಸಹಚರರು ಸಿಲಿಕಾನ್ ಸಿಟಿಯಲ್ಲಿ ನೆಲೆಯಾಗುತ್ತಿದ್ದಾರೆ

ಭಾರತದಲ್ಲಿ ಉಗ್ರ ಚಟುವಟಿಕೆಗೆ ಹಣಕಾಸು ನೆರವು: ಲಷ್ಕರ್ ಭಯೋತ್ಪಾದಕ ಬಂಧನ
ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಕಾರ್ಯಕರ್ತ ಶೇಖ್ ಅಬ್ದುಲ್ ನಯೀಮ್ ಅಲಿಯಾಸ್ ಸುಹೈಲ್ ಖಾನ್ ಎಂಬಾತನಿಗೆ ಧನಸಹಾಯ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಪರಾರಿಯಾಗಿದ್ದ ಆರೋಪಿ ಜಾವೇದ್ ಅಲಿಯಾಸ್ ಜಾವೇದ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾನುವಾರ ಬಂಧಿಸಿದೆ.

