NICE project

'ಕಾನೂನಿನ ಪ್ರಕಾರ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತೇವೆ': NICE ಯೋಜನೆ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿಕೆ; Video
ಜೆಡಿಎಸ್ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, NICE ಯೋಜನೆಯನ್ನು ಸರ್ಕಾರವೇ ವಹಿಸಿಕೊಂಡು, ‘ಅನಧಿಕೃತ’ವಾಗಿ ನಡೆಯುತ್ತಿರುವ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

NICE ಯೋಜನೆಯನ್ನು ಸರ್ಕಾರ ವಶಕ್ಕೆ ಪಡೆಯಲಿ, ವಾಹನ ಸವಾರರೇ ಟೋಲ್ ಪಾವತಿಸಬೇಡಿ: ಸಚಿವ ಎಚ್.ಡಿ ಕುಮಾರಸ್ವಾಮಿ; Video
ನೈಸ್ ಯೋಜನೆ ಮತ್ತು ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡೂ ವಿಚಾರಗಳನ್ನು ಮುಂಬರುವ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

ನೈಸ್ ಯೋಜನೆ: ಡಿ.ಕೆ ಶಿವಕುಮಾರ್ ಆಕ್ಷೇಪ ಸ್ವಾಗತಾರ್ಹ; ಕ್ರಮ ಕೈಗೊಳ್ಳುತ್ತಾರೆಯೇ ಕಾದು ನೋಡೋಣ- ದೇವೇಗೌಡ
ಈ ಇಳಿ ವಯಸ್ಸಿನಲ್ಲಿ ನನ್ನನ್ನು ಪ್ರತಿವಾದಿಯಾಗಿಸಿ ಅರ್ಜಿ ಹಾಕಿರುವುದು ಎಷ್ಟು ಸರಿ ಎಂದು ನಾನು ಪ್ರಶ್ನಿಸಿದ್ದೆ. ಡಿ.ಕೆ ಶಿವಕುಮಾರ್ ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆಯೇ ಎಂಬುದನ್ನು ನೋಡಬೇಕು ಎಂದಿದ್ದಾರೆ.

ಬಹುವಿವಾದಿತ 'ನೈಸ್' ಯೋಜನೆ ಪರಿಶೀಲನೆಗೆ ಹೊಸ ಸಚಿವ ಸಂಪುಟ ಉಪಸಮಿತಿ ರಚನೆ
ಕ್ರಿಯಾ ಒಪ್ಪಂದದ ಪ್ರಕಾರ 13,237 ಎಕರೆ ಖಾಸಗಿ ಜಮೀನು ಮತ್ತು 6,956 ಸರಕಾರಿ ಜಮೀನು ಒಟ್ಟು 20,193 ಎಕರೆ ಭೂಸ್ವಾಧೀನಪಡಿಸಿಕೊಂಡು ನೀಡಲು ನೈಸ್ ಕಂಪೆನಿಯೊಂದಿಗೆ ಒಪ್ಪಂದವಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣವಾಗಿದೆ; ಅಗತ್ಯವಿಲ್ಲದ ನೈಸ್ ರಸ್ತೆ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಬಿ ಜಯಚಂದ್ರ
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆಯ ಅಗತ್ಯವಿಲ್ಲ. ಹೀಗಾಗಿ ನೈಸ್ ಯೋಜನೆಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

