Nitin Gadkari

ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಕರೆ; ಕೂಲಂಕಷ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ
ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರವು ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭ
ರಾಜ್ಯದ ಮಹತ್ವಕಾಂಕ್ಷೆಯ ಶಿರಾಡಿ ಘಾತ್ ಚತುಷ್ಪಥ ಕಾಮಗಾರಿಯನ್ನು ಮಾರ್ಚ್ ನಿಂದ ಆರಂಭಿಸಲಾಗುತ್ತಿದೆ. ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ: ಗಡ್ಕರಿ ಸೂಚನೆ
ವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್‌ಪ್ರೆಸ್‌ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಆಗಸದಿಂದ ಕಂಡಿದ್ದು ಹೀಗೆ...!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಬಹುತೇಕ ಪೂರ್ಣಗೊಂಡಿದ್ದು ಆಗಸದಿಂದ ಎಕ್ಸ್ ಪ್ರೆಸ್ ವೇ ಕಂಡಿದ್ದು ಹೀಗೆ...

ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ವೈಮಾನಿಕ ಸಮೀಕ್ಷೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಗುರುವಾರ ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಪ್ರಗತಿ ಪರಿಶೀಲನೆ ನಡೆಸಿದರು.

ರಾಜ್ಯಕ್ಕೆ ಜೆ ಪಿ ನಡ್ಡಾ, ನಿತಿನ್ ಗಡ್ಕರಿ ಆಗಮನ, ರಾಜಕೀಯ ಚಟುವಟಿಕೆ ಜೋರು: ಕಾಂಗ್ರೆಸ್-ಜೆಡಿಎಸ್ ಗೆ ಟೂಲ್ ಕಿಟ್ ರೆಡಿ ಮಾಡಿ ಎಂದ ಬಿಜೆಪಿ
ರಾಜ್ಯಕ್ಕೆ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಆಗಮನವಾಗಿದೆ. ಇಂದು ಹಲವು ಕಾರ್ಯಕ್ರಮಗಳಲ್ಲಿ ಇಬ್ಬರೂ ನಾಯಕರು ಭಾಗಿಯಾಗಲಿದ್ದಾರೆ.

ಬೆಂಗಳೂರಿಗೆ ನಿತಿನ್ ಗಡ್ಕರಿ ಭೇಟಿ: ಜನವರಿ 5ಕ್ಕೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ
ಬಹು ಚರ್ಚಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಈ ಬಾರಿಯ ವಿಧಾನಸಭಾ ಚುನಾವಣೆಗೂ ಮುನ್ನ ಉದ್ಘಾಟನೆಗೊಳ್ಳುವ ಸಾಧ್ಯತೆಯಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಕಾಮಗಾರಿ ಪರಿಶೀಲಿಸಲಿದ್ದಾರೆಂದು ತಿಳಿದುಬಂದಿದೆ.

ಅರಣ್ಯ ನಾಶಪಡಿಸಿ ರಸ್ತೆ ವಿಸ್ತರಣೆ ಮಾಡುವುದನ್ನು ನಿಲ್ಲಿಸಬೇಕು: ಸರ್ಕಾರಕ್ಕೆ ಪರಿಸರ ಸಂರಕ್ಷಣಾ ವಾದಿಗಳ ಆಗ್ರಹ
ಅರಣ್ಯ ನಾಶಪಡಿಸಿ ರಸ್ತೆ ವಿಸ್ತರಣೆ ಮಾಡಲು ಮುಂದಾಗುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕ್ರಮವನ್ನು ಪರಿಸರ ಸಂರಕ್ಷಣಾ ವಾದಿಗಳು ಖಂಡಿಸಿದ್ದಾರೆ.

ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ: ಘಾಟ್ ರಸ್ತೆ ವಿಸ್ತರಣೆ NHAI ಗೆ: ನಿತಿನ್ ಗಡ್ಕರಿ
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್‌ಗೆ ಉದ್ದೇಶಿಸಿರುವ ಹಸಿರು ಸುರಂಗ ಬೈಪಾಸ್ ಕಾರ್ಯಸಾಧುವಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ತಿಳಿಸಿದ್ದು 26 ಕಿಮೀ ಘಾಟ್ ಸ್ಟ್ರೆಚ್‌ನಲ್ಲಿ ಚತುಷ್ಪಥ ರಸ್ತೆಗಾಗಿ ವಿವರವಾದ ಯೋಜನಾ ವರದಿ(ಡಿಪಿಆರ್) ತಯಾರಿಸಲಾಗುತ್ತಿದೆ ಎಂದರು.

