Nitish Kumar

INDI ಕೂಟಕ್ಕಾಗಿ ನಿತೀಶ್ ಕುಮಾರ್ ರ ಹಿಂದಿ ಹೇರುವಿಕೆ ಸಹಿಸಿಕೊಂಡಿದ್ದೆವು: ಡಿಎಂಕೆ
ಮೈತ್ರಿ ಸಭೆಯಲ್ಲಿ ಹಿಂದಿ ಮಾತ್ರ ಮಾತನಾಡುವಂತೆ ನಿತೀಶ್ ಕುಮಾರೇ ಹೇಳಿದ್ದರು. INDI ಕೂಟಕ್ಕಾಗಿ ನಿತೀಶ್ ಕುಮಾರ್ ರ ಹಿಂದಿ ಹೇರುವಿಕೆ ಸಹಿಸಿಕೊಂಡಿದ್ದೆವು ಎಂದು ದ್ರಾವಿಡ ಮುನ್ನೇತ್ರ ಕಳಗಂ (DMK) ನಾಯಕ ಟಿಆರ್ ಬಾಲು ಭಾನುವಾರ ಚೆನ್ನೈನಲ್ಲಿ ಹೇಳಿದ್ದಾರೆ.

ಮೈತ್ರಿಯಿಂದ ಜೆಡಿಯು ಹೊರಬರುವ ಬಗ್ಗೆ ನನಗೆ ಮಾಹಿತಿ ಇಲ್ಲ, ನಾವು ಒಗ್ಗೂಡಿದರೆ ಪ್ರಜಾಪ್ರಭುತ್ವ ಉಳಿಯುತ್ತದೆ: ಮಲ್ಲಿಕಾರ್ಜುನ ಖರ್ಗೆ
ಇಂಡಿಯಾ ಮೈತ್ರಿಕೂಟ ಒಟ್ಟಾಗಿರಲು ಪ್ರಯತ್ನ ಮಾಡುತ್ತಿದ್ದೇವೆ. ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇನೆ. ಹೀಗಾಗಿ ಇನ್ನು ಆ ವಿಚಾರದ ಬಗ್ಗೆ ಈಗ ಹೇಳಿಕೆ ಕೊಟ್ಟರೆ ಗೊಂದಲ ಆಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದಾಖಲೆಯ 9ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಪದಗ್ರಹಣ; ಬಿಜೆಪಿಯ ವಿಜಯ್ ಕುಮಾರ್, ಸಾಮ್ರಾಟ್ ಚೌಧರಿ DCM!
ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಅವರು 9ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಕಸ ಕಸದಬುಟ್ಟಿ ಸೇರಿದೆ: ನಿತೀಶ್ ಎನ್ ಡಿಎ ಸೇರಿದ್ದರ ಬಗ್ಗೆ ಲಾಲು ಪುತ್ರಿ ರೋಹಿಣಿ
ಬಿಹಾರ ಸಿಎಂ ನಿತೀಶ್ ಕುಮಾರ್ ಮಹಾಘಟಬಂಧನ್ ತೊರೆದು ಬಿಜೆಪಿ ನೇತೃತ್ವದ ಎನ್ ಡಿಎ ಸೇರಿದ್ದರ ಬಗ್ಗೆ ಆರ್ ಜೆಡಿಯ ಮುಖ್ಯಸ್ಥ ಲಾಲು ಯಾದವ್ ಪುತ್ರಿ ರೋಹಿಣಿ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

ಆರ್ಜೆಡಿ ಜೊತೆ ಕೆಲಸ ಮಾಡುವುದು ಕಷ್ಟಕರವಾಗಿತ್ತು, ಹೀಗಾಗಿ ಮೈತ್ರಿಯಿಂದ ಹೊರಬಂದೆ: ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್
ಇಂದು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೂ ಹೇಳಿದ್ದೇನೆ. ಮಹಾಘಟಬಂಧನ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿಲ್ಲದ ಕಾರಣ ಈ ಪರಿಸ್ಥಿತಿ ಬಂದಿದೆ. ಎಲ್ಲರಿಂದಲೂ ಅಭಿಪ್ರಾಯಗಳನ್ನು ಸಂಗ್ರಹಿಸಿ ಈ ತೀರ್ಮಾನ ತೆಗೆದುಕೊಂಡಿದ್ದೇನೆ ಇದು ಮಹಾಘಟಬಂಧನ ಮೈತ್ರಿಯಿಂದ ಹೊರಬಂದು ಮುಖ್ಯಮಂತ್ರಿ ಸ್ಥಾನಕ್ಕೆ

ಮಹಾಘಟಬಂಧನ ಮೈತ್ರಿ ಮುರಿದು ಸಿಎಂ ಸ್ಥಾನಕ್ಕೆ ರಾಜೀನಾಮೆ: ನಿತೀಶ್ ಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ
ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್ಡಿಎ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಇಂದು ಭಾನುವಾರ ಸಂಜೆ ವೇಳೆಗೆ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಬಹುತೇಕ ನಿಚ್ಛಳವಾಗಿದೆ.

ಅಧಿಕಾರ ಕಳೆದುಕೊಳ್ಳುತ್ತಿರುವ ಆರ್ ಜೆಡಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಹೇಳಿದ್ದೇನು?
ಬಿಹಾರದಲ್ಲಿ ಅಧಿಕಾರ ಕಳೆದುಕೊಳ್ಳುತ್ತಿರುವ ರಾಷ್ಟ್ರೀಯ ಜನತಾ ದಳವು(RJD) ಭಾನುವಾರ ತನ್ನ ಯುವ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ನೀಡಿದ ಕೊಡುಗೆಗಳಿಗಾಗಿ "ಧನ್ಯವಾದ" ಎಂದು ಪತ್ರಿಕೆಗಳಲ್ಲಿ ಪೂರ್ಣ ಪುಟದ ಜಾಹೀರಾತುಗಳನ್ನು ನೀಡಿದೆ.

ನಿತೀಶ್ ಕುಮಾರ್ ಎನ್ ಡಿಎಗೆ ವಾಪಸ್: ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದ ರವಿಶಂಕರ್ ಪ್ರಸಾದ್!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದ್ದು, ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದು ಮಾಜಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ನಿತೀಶ್ ಕುಮಾರ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮುಂಚೆಯೇ ಗೊತ್ತಿತ್ತು: ಖರ್ಗೆ
ನಿತೀಶ್ ಕುಮಾರ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮುಂಚೆಯೇ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

