Nizamuddin

ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ ಜನರ ಮಾಹಿತಿ ಸಿಕ್ಕಿದೆ:ಸಚಿವ ಶ್ರೀರಾಮುಲು
ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ನಿಜಾಮುದ್ದೀನ್ ಮಸೀದಿಯಿಂದ ಕೊರೋನಾ ಸ್ಫೋಟ: ಕೂಡಲೇ ಕ್ರಮ ಕೈಗೊಳ್ಳುವಂತೆ ದೆಹಲಿ ಸರ್ಕಾರಕ್ಕೆ ಪೊಲೀಸರ ಪತ್ರ
ಲಾಕ್ ಡೌನ್ ನಡುವಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸಿದ ಹಿನ್ನೆಲೆಯಲ್ಲಿ ಈ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರು ದೆಹಲಿ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದವರು ಕೂಡಲೇ ಮಾಹಿತಿ ನೀಡಿ:ಜನತೆಗೆ ಸರ್ಕಾರ ಮನವಿ
ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಮರ್ಕಜ್ ನಲ್ಲಿ ಭಾಗವಿಸಿದ್ದ ವಿವಿಧ ರಾಜ್ಯಗಳ ಅನೇಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಲ್ಲಿ ಹಾಜರಿದ್ದ ರಾಜ್ಯದ ಜನತೆ ಸ್ವಯಂ ಪ್ರೇರಿತರಾಗಿ ಆಗಮಿಸಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ.

ದೆಹಲಿ ಮಸೀದಿಯಿಂದ ಕೊರೋನಾ ಸ್ಫೋಟ: ತಮಿಳುನಾಡಿನಲ್ಲಿ ಒಂದೇ ದಿನ 50 ಮಂದಿಯಲ್ಲಿ ಸೋಂಕು ಪತ್ತೆ
ಕೊರೋನಾ ನಿಗ್ರಹಕ್ಕೆ ದೇಶದಾದ್ಯಂತ ಲಾಕ್ ಡೌನ್ ಹೇರಿರುವ ನಡುವಲ್ಲೇ ದೆಹಲಿಯ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆ ಇದೀಗ ಇಡೀ ದೇಶಕ್ಕೆ ಕೊರೋನಾ ವೈರಸ್ ಹಬ್ಬಿಸಿರುವ ಆತಂಕ ಹೆಚ್ಚಾಗಿದೆ. ಇದರಂತೆ ತಮಿಳುನಾಡು ರಾಜ್ಯದಲ್ಲಿ ಮಂಗಳವಾರ ಒಂದೇ ದಿನದಲ್ಲಿ 50 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ದೆಹಲಿ ನಿಜಾಮುದ್ದೀನ್ ಕಾರ್ಯಕ್ರಮದಲ್ಲಿದ್ದವರ ಪೈಕಿ 441 ಜನರಿಗೆ ಕೊರೋನಾ ಲಕ್ಷಣ: ಆಸ್ಪತ್ರೆಗೆ ದಾಖಲು
ದೆಹಲಿಯಲ್ಲಿ ಕೊರೋನಾ ನಡುವೆಯೂ ನಿಜಾಮುದ್ದೀನ್ ಮಸೀದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಂದ ಸೋಂಕು ಹರಡುವ ಭೀತಿ ಎದುರಾಗಿದೆ.

ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ವೈರಸ್ ಪತ್ತೆ: 300 ಮಂದಿ ವಿದೇಶಿಯರು ಬ್ಲಾಕ್'ಲಿಸ್ಟ್'ಗೆ
ರಾಷ್ಟ್ರ ರಾಜಧಾನಿ ನವದೆಹಲಿಯ ನಿಜಾಮುದ್ದೀನ್ ಮರ್ಕಝ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೋವಿಡ್ - 19 ಸೋಂಕು ದೃಢಪಟ್ಟಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಮಂಗಳವಾರ ತಿಳಿಸಿದ್ದಾರೆ.

ಮಹಾಮಾರಿ ಕೊರೋನಾಗೆ ತೆಲಂಗಾಣದ 6 ಮಂದಿ ಬಲಿ: ನಿಜಾಮುದ್ದೀನ್ ಸುತ್ತಮುತ್ತ ಪೊಲೀಸರ ತೀವ್ರ ನಿಗಾ, ಐಸೋಲೇಷನ್'ನಲ್ಲಿ 200 ಮಂದಿ
ದೆಹಲಿಯ ನಿಜಾಮುದ್ದೀನ್ ಪ್ರದೇಶದ ಅಲೇಮಿ ಮರ್ಕಜ್ ಬಂಗ್ಲೇವಾಲಿ ಮಸೀದಿಯಲ್ಲಿ ಮಾ.13-15ರವರೆ ಗೆ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ 10,000 ಮಂದಿ ಭಾಗಿಯಾಗಿದ್ದು, ಇದೀಗ ಅಲ್ಲಿಗೆ ಹೋಗಿ ಬಂದಿದ್ದ ತೆಲಂಗಾಣ ಮೂಲಕ 6 ಮಂದಿ ಮಹಾಮಾರಿ ಕೊರೋನಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ನಿಜಾಮುದ್ದೀನ್ ಸುತ್ತಮತ್ತ ಪೊಲೀಸರು ತೀವ್ರ ನಿಗಾವಹಿಸಿದ್ದು...

