ದೇಶನೋಯ್ಡಾದಲ್ಲಿ ಹೌಸಿಂಗ್ ಸೊಸೈಟಿ ಗೋಡೆ ಕುಸಿದು ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯ
ನೋಯ್ಡಾದ ಹೌಸಿಂಗ್ ಸೊಸೈಟಿಯೊಂದರ ಸುತ್ತಲಿನ ಗೋಡೆಯ ಒಂದು ಭಾಗ ಮಂಗಳವಾರ ಬೆಳಗ್ಗೆ ಕುಸಿದು ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಟರ್ 21ರ ಜಲ ವಾಯು ವಿಹಾರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.