Noida

PUBG ಆಡುವಾಗ ನೋಯ್ಡಾ ವ್ಯಕ್ತಿ ಪರಿಚಯ, 4 ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕ್ ಮಹಿಳೆ!
PUBG ಗೇಮ್ ಆಡುವಾಗ ಪರಿಚಿತನಾದ ನೋಯ್ಡಾ ವ್ಯಕ್ತಿಯೊಂದಿಗೆ ಇರಲು ಪಾಕಿಸ್ತಾನ ಮೂಲದ ಮಹಿಳೆಯೊಬ್ಬರು ತಮ್ಮ 4 ಮಕ್ಕಳೊಂದಿಗೆ ಭಾರತಕ್ಕೆ ಆಗಮಿಸಿ ಆತನೊಂದಿಗೆ ಸಂಸಾರ ಹೂಡಿರುವ ಘಟನೆ ಬೆಳಕಿಗೆ ಬಂದಿದೆ.

ರ‍್ಯಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು ಮಾಡೆಲ್ ದುರ್ಮರಣ
ಫ್ಯಾಷನ್ ಶೋ ವೇಳೆ ರ್ಯಾಂಪ್ ವಾಕ್ ಮಾಡುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ವೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನೋಯ್ಡಾದಲ್ಲಿ ನಡೆದಿದೆ.

ನೋಯ್ಡಾ: ಸಿಗರೇಟ್ ವಿಚಾರವಾಗಿ ವಿದ್ಯಾರ್ಥಿಗಳು, ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ, 33 ವಿದ್ಯಾರ್ಥಿಗಳ ಬಂಧನ
ಗ್ರೇಟರ್ ನೋಯ್ಡಾದ ಗೌತಮ್ ಬುದ್ಧ ವಿಶ್ವವಿದ್ಯಾನಿಲಯದಲ್ಲಿ ಸಿಗರೇಟ್ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ಖಾಸಗಿ ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ಸಂಭವಿಸಿದ್ದು 33 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನೋಯ್ಡಾ: ಸಿಲಿಂಡರ್ ಸ್ಫೋಟಗೊಂಡು 12 ದಿನದ ಹಸುಗೂಸು ಸೇರಿ ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಾಯ
ಭಾನುವಾರ ಮುಂಜಾನೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 12 ದಿನದ ಹೆಣ್ಣು ಮಗು ಸೇರಿದಂತೆ ಇಬ್ಬರು ಮಕ್ಕಳು ಸಜೀವ ದಹನವಾಗಿದ್ದಾರೆ ಮತ್ತು ಅವರ ಕುಟುಂಬದ ಇತರ ನಾಲ್ಕು ಸದಸ್ಯರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೋಯ್ಡಾ: 15 ವರ್ಷದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿದ ಮೂವರು
ನೋಯ್ಡಾದ ಕಸ್ನಾ ಗ್ರಾಮದಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ನೋಯ್ಡಾ ಪೊಲೀಸ್ ಆಯುಕ್ತರಾಗಿ ಲಕ್ಷ್ಮಿ ಸಿಂಗ್ ನೇಮಕ, ಯುಪಿಯ ಮೊದಲ ಮಹಿಳಾ ಪೊಲೀಸ್ ಆಯುಕ್ತೆ
ಉತ್ತರ ಪ್ರದೇಶ ಸರ್ಕಾರ ಐಪಿಎಸ್ ಅಧಿಕಾರಿ ಲಕ್ಷ್ಮಿ ಸಿಂಗ್ ಅವರನ್ನು ನೋಯ್ಡಾ ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದ್ದು, ರಾಜ್ಯದ ಪೊಲೀಸ್ ಕಮಿಷನರೇಟ್ ಮುಖ್ಯಸ್ಥರಾಗಿರುವ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಾಲೀಕರ ಗಮನಕ್ಕೆ: ನಾಯಿ ಕಚ್ಚಿದರೆ ಚಿಕಿತ್ಸೆಗೆ ಅದರ ಮಾಲೀಕರು 10,000 ತೆರಬೇಕು!
ನಾಯಿ ಮಾಲೀಕರೇ ಎಚ್ಚರ.. ನಿಮ್ಮ ಸಾಕು ಶ್ವಾನ ಇತರರನ್ನು ಕಚ್ಚಿದರೆ ಅವರ ಚಿಕಿತ್ಸೆಗೆ ನೀವೇ 10,000 ತೆರಬೇಕು.. ಇಂತಹುದು ಕಾನೂನು ಇದೀಗ ಜಾರಿಗೆ ಬಂದಿದೆ.

ನೋಯ್ಡಾ: ಕೆಲವೇ ಸೆಕೆಂಡುಗಳಲ್ಲಿ ನೆಲಕ್ಕುರುಳಿದ ಅವಳಿ ಗೋಪುರದ ಕಟ್ಟಡಗಳು
ನಿಯಮ ಬಾಹಿರವಾಗಿ ನಿರ್ಮಿಸಿದ್ದ ಕಟ್ಟಡವನ್ನು ನೆಲಸಮ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಒಂದು ವರ್ಷದ ಬಳಿಕ ನೋಯ್ಡಾದಲ್ಲಿ ಅಕ್ರಮವಾಗಿ ನಿರ್ಮಾಣವಾಗಿದ್ದ ಸೂಪರ್‌ಟೆಕ್ ಅವಳಿ ಗೋಪುರಗಳನ್ನು ಕೇವಲ ಕೆಲವೇ ಸೆಕೆಂಡುಗಳಲ್ಲಿ ಇಂದು (ಭಾನುವಾರ) ನೆಲಸಮ ಮಾಡಲಾಗಿದೆ.

ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿದ್ದು ಕ್ಯಾಮೆರಾದಲ್ಲಿ ಸೆರೆ, ನೋಯ್ಡಾ ಮಹಿಳೆ ಬಂಧನ
ಐಷಾರಾಮಿ ನೋಯ್ಡಾ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯೊಬ್ಬರು ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

