ರಾಜ್ಯಕಾನೂನು ಪ್ರಕ್ರಿಯೆ ಸರಳಗೊಳಿಸಲು ಪ್ರಯತ್ನ: ಕೃತಕ ಬುದ್ಧಿಮತ್ತೆ ಆಧಾರಿತ ಸಾಧನ ಬಳಸಿ ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ನಿಂದ ಲಿಪ್ಯಂತರ
ಕಳೆದ ವಾರ ಸುಪ್ರೀಂ ಕೋರ್ಟ್ ಭಾರತೀಯ ಕಾನೂನು ಕ್ಷೇತ್ರದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಶಿವಸೇನೆ ಪಕ್ಷದ ಚಿಹ್ನೆ ಮತ್ತು ಹೆಸರಿನ ಮೇಲಿನ ಚುನಾವಣಾ ಆಯೋಗದ ಆದೇಶಕ್ಕೆ ಸಂಬಂಧಿಸಿದ ಪ್ರಕರಣದ ಪ್ರಕ್ರಿಯೆಗಳನ್ನು ಕೃತಕ ಬುದ್ಧಿಮತ್ತೆ ಆಧಾರಿತ ಸಾಧನವನ್ನು ಬಳಸಿಕೊಂಡು ನೈಜ ಸಮಯದಲ್ಲಿ ಲಿಪ್ಯಂತರ ಮಾಡಲಾಗಿದೆ.