ರಾಜ್ಯಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಆಸ್ತಿ ಘೋಷಣೆ ಮಾಡದಿರುವುದೂ ಭ್ರಷ್ಟಾಚಾರಕ್ಕೆ ಸಮ: ಹೈಕೋರ್ಟ್
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಘೋಷಿಸದಿದ್ದರೆ ಅಥವಾ ಮರೆ ಮಾಚಿದರೆ ಅದೂ ಕೂಡ ಭ್ರಷ್ಟಾಚಾರ ಎನಿಸಲಿದ್ದು, ಇದು ಅನರ್ಹತೆಗೂ ಕಾರಣವಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.