ದೇಶನವದೆಹಲಿ: ನಾರ್ತ್ ಬ್ಲಾಕ್ನಲ್ಲಿ ಸಣ್ಣ ಪ್ರಮಾಣದ ಅಗ್ನಿ ಅವಘಡ, ಯಾವುದೇ ಕಡತಕ್ಕೆ ಹಾನಿಯಾಗಿಲ್ಲ- MHA
ರಾಷ್ಟ್ರ ರಾಜಧಾನಿಯಲ್ಲಿರುವ ಹೆಚ್ಚಿನ ಭದ್ರತೆಯಿರುವ ಪ್ರದೇಶಗಳಲ್ಲಿ ಒಂದಾಗಿರುವ ರೈಸಿನಾ ಹಿಲ್ಸ್ನಲ್ಲಿರುವ ಗೃಹ ವ್ಯವಹಾರಗಳು ಮತ್ತು ಸಿಬ್ಬಂದಿ ಸಚಿವಾಲಯಗಳನ್ನು ಹೊಂದಿರುವ ನಾರ್ತ್ ಬ್ಲಾಕ್ನಲ್ಲಿ ಮಂಗಳವಾರ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಯಾರೂ ಗಾಯಗೊಂಡಿಲ್ಲ, ಯಾವುದೇ ಕಡತಕ್ಕೂ ಹಾನಿಯಾಗಿಲ್ಲ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.