notice

ಕಾಂಗ್ರೆಸ್ ಆಯ್ತು, 11 ಕೋಟಿ ರೂ. ಬಾಕಿ ಪಾವತಿಸುವಂತೆ ಈಗ ಸಿಪಿಐಗೆ ಐಟಿ ಇಲಾಖೆ ನೋಟಿಸ್!
ಕಳೆದ ಕೆಲವು ವರ್ಷಗಳಿಂದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಅನ್ನು ಬಳಸಿದ್ದಕ್ಕಾಗಿ 11 ಕೋಟಿ ರೂ.ಗಳ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ನೋಟಿಸ್ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ 1,700 ಕೋಟಿ ರೂ. ಹೊಸ ನೋಟಿಸ್!
ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್‌ನಲ್ಲಿನ ವ್ಯತ್ಯಾಸಗಳಿಗಾಗಿ ಆದಾಯ ತೆರಿಗೆ ಇಲಾಖೆಯು 1,700 ಕೋಟಿ ರೂಪಾಯಿ ಮೊತ್ತದ ಹೊಸ ನೋಟಿಸ್ ಅನ್ನು ಕಾಂಗ್ರೆಸ್‌ಗೆ ರವಾನಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಹಣದ ಕೊರತೆಯಿರುವ ಪಕ್ಷಕ್ಕೆ ಮತ್ತೊಂದು ಹೊಡೆತ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಶಿಥಿಲಾವಸ್ಥೆ ಕಟ್ಟಡದಲ್ಲಿ ಐಸ್‌ಕ್ರೀಂ ತಯಾರಿಕೆ: ಆಹಾರ ಸುರಕ್ಷತಾ ಪ್ರಾಧಿಕಾರ, ಬಿಬಿಎಂಪಿಗೆ 'ಹೈ' ನೋಟಿಸ್
ಬೆಂಗಳೂರಿನ ಶೇಷಾದ್ರಿಪುರಂನ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಭಾರತ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.

ಜಾತಿ ಗಣತಿ: ನಿಷ್ಪಕ್ಷಪಾತ ಸಮಿತಿ ರಚನೆಗೆ ಕೋರಿಕೆ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ‘ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ)ಯನ್ನು ಆಕ್ಷೇಪಿಸಿ ಹೈಕೋರ್ಟ್ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

BBMP ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ: KPSC ಗೆ 'ಹೈ' ನೋಟಿಸ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಸಂಬಂಧ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಚುನಾವಣಾ ಬಾಂಡ್‌ಗಳ ಸಂಖ್ಯೆ ಪ್ರಕಟಿಸಿ: SBI ಗೆ ಸುಪ್ರೀಂ ಕೋರ್ಟ್ ನೊಟೀಸ್!
ನಾಳೆ ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೊಟೀಸ್ ನೀಡಿದೆ

ಡಾಂಬರು ಮಿಶ್ರಣ ಘಟಕದಿಂದ ಪರಿಸರ ಮಾಲಿನ್ಯ: ರಾಜ್ಯ ಸರ್ಕಾರ, KSPCB ಗೆ ಹೈಕೋರ್ಟ್ ನೋಟಿಸ್
ಕೋಲಾರ ತಾಲ್ಲೂಕಿನ ಮೇಡಿಹಾಳದ ಬಳಿ ಸ್ಥಾಪಿಸಲಾಗಿರುವ ಡಾಂಬರು ಮಿಶ್ರಣ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ದೂರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ನಟ ದರ್ಶನ್ಗೆ ಮಹಿಳಾ ಆಯೋಗದಿಂದ ನೋಟಿಸ್: 10 ದಿನದಲ್ಲಿ ಉತ್ತರಿಸುವಂತೆ ಸೂಚನೆ!
ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿ ಪರ್ವದಲ್ಲಿ ಹೆಣ್ಣಿನ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ನಿಯಮ ಅನುಸರಿಸದ ವ್ಯಾಪಾರಿಗಳು, ಅಂಗಡಿಗಳಿಗೆ ಬಿಬಿಎಂಟಿ ನೋಟಿಸ್
ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ ನೀತಿಯ ಅನುಷ್ಠಾನ ಪ್ರಾಧಿಕಾರವಾಗಿರುವ ಬಿಬಿಎಂಪಿ ಆರೋಗ್ಯ ಇಲಾಖೆ ನಿಯಮವನ್ನು ಅನುಸರಿಸದ 50 ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಮತ್ತು ಅಂಗಡಿಗಳಿಗೆ ನೋಟಿಸ್ ಕಳುಹಿಸಿದೆ.

