notice

ಅತ್ತಿಬೆಲೆ ಪಟಾಕಿ ದುರಂತ: ರಾಜಕಾರಣಿಗಳ ಪ್ರಭಾವ, ಸೀಜ್ ಆಗಿದ್ದ 2-3 ಗಂಟೆಗಳಲ್ಲೇ ಓಪನ್ ಆಗಿದ್ದ ಗೋದಾಮು!
ಅತ್ತಿಬೆಲೆಯ ಬಾಲಾಜಿ ಟ್ರೇಡರ್ಸ್‌ನ ಪಟಾಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು 14 ಮಂದಿ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಹಲವು ಸ್ಫೋಟಕ ಮಾಹಿತಿಗಳು ಇದೀಗ ಬಹಿರಂಗಗೊಳ್ಳುತ್ತಿವೆ.

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳು: ಕೇಂದ್ರ ಸರ್ಕಾರ, ಇಸಿಗೆ ಸುಪ್ರೀಂ ಕೋರ್ಟ್ ನೋಟಿಸ್
ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.

ನಿವೃತ್ತ ನ್ಯಾಯಾಧೀಶ ಹುನಗುಂದ ನೇಮಕ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ (ಕೆಎಸ್‌ಎಚ್‌ಆರ್‌ಸಿ) ಮಾಜಿ ಸದಸ್ಯ ಸಿ ಜೆ ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ಮತ್ತೊಮ್ಮೆ ನೋಟಿಸ್ ಜಾರಿಗೆ ಪೊಲೀಸರು ಮುಂದು!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಎರಡನೇ ಬಾರಿ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಚುನಾವಣಾ ಅಕ್ರಮ ಪ್ರಕರಣ: ಶಾಸಕ ರಿಜ್ವಾನ್ ಅರ್ಷದ್‌ಗೆ ನೋಟಿಸ್ ಜಾರಿ
ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ಅರ್ಜಿ ಸಲ್ಲಿಕೆಯಾಗಿದೆ.

ನಿಮಯ ಉಲ್ಲಂಘಿಸಿ ಕಟ್ಟಡ ನಿರ್ಮಾಣ: 7 ದಿನಗಳಲ್ಲಿ ಉತ್ತರಿಸುವಂತೆ ನಟ ಗಣೇಶ್‌ಗೆ 'ಹೈ ಕೋರ್ಟ್' ಸೂಚನೆ
ಬಂಡೀಪುರ ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಯಲ್ಲಿ ಬರುವ ತಮ್ಮ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ, ಜೆಸಿಬಿ ಬಳಕೆ ಮಾಡಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ 7 ದಿನಗಳಲ್ಲಿ ನಟ ಗಣೇಶ್...

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ನೋಟಿಸ್ ಜಾರಿ, ಅಸಮಾಧಾನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದಾರರಿಗೆ ಅಂದರೆ, ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೊಟೀಸ್ ಜಾರಿ ಮಾಡಿದ್ದು, ಈ ಬೆಳವಣಿಗೆಗೆ ಮುಖ್ಯ ಎಂಜಿನಿಯರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ: ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್
ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ.

ಎನ್ಎಫ್ ಹೆಚ್ ಎಸ್ ನಲ್ಲಿ ಅಂಗವೈಕಲ್ಯದ ಬಗ್ಗೆ ಪ್ರಶ್ನೆಗಳಿಲ್ಲದೇ ಇರುವುದಕ್ಕೆ ಕೇಂದ್ರ ಸಚಿವಾಲಯಕ್ಕೆ ಹೈಕೋರ್ಟ್ ನೊಟೀಸ್
ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ಅಂಗವೈಕಲ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳೇ ಇಲ್ಲದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನೊಟೀಸ್ ಜಾರಿಗೊಳಿಸಿದೆ.

