notice

ವಿಪಕ್ಷ ಒಕ್ಕೂಟಕ್ಕೆ 'INDIA' ಹೆಸರು ಬಳಕೆ: 26 ರಾಜಕೀಯ ಪಕ್ಷಗಳು, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ
ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (INDIA) ಎಂದು ಹೆಸರಿಟ್ಟಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ 26 ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಸಿಬಿಎಸ್‌ಸಿ, ಐಸಿಎಸ್‌ಸಿ ಶಾಲೆಗಳ ಮೇಲೆ ಕನ್ನಡ ಹೇರಿಕೆ: ರಾಜ್ಯ, ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಒಂದು ವಿಷಯವಾಗಿ ಹೇರಿರುವ ವಿಚಾರ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಶಾಸಕರಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಅರ್ಜಿ; ಸಿಎಂಗೆ ಹೈಕೋರ್ಟ್ ನೋಟಿಸ್
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಆರೋಪದಡಿ ವರುಣಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ.

ನೈತಿಕ ಪೊಲೀಸ್ ಗಿರಿ: ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರಿನ ನೋಟಿಸ್
ಮಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ಸಂಸತ್ತು ಅಧಿವೇಶನ: ಉಭಯ ಸದನಗಳಲ್ಲಿ ವಿಪಕ್ಷಗಳಿಂದ ನೊಟೀಸ್, ಮಣಿಪುರ ಹಿಂಸಾಚಾರ ಬಗ್ಗೆ ಚರ್ಚೆಗೆ ಒತ್ತಾಯ
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೊ ಹೊರಬಿದ್ದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ವಿವಾದದಿಂದ ಉದ್ಭವಿಸಿರುವ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಹಲವಾರು ವಿರೋಧ ಪಕ್ಷದ ಸಂಸದರು ಉಭಯ ಸದನಗಳಲ್ಲಿ ನೊಟೀಸ್ ನೀಡಿದ್ದಾರೆ.

ಚಂದ್ರಯಾನ -3 ಕುರಿತು ಟೀಕೆ: ಉಪನ್ಯಾಸಕ ಹುಲಿಕುಂಟೆ ಮೂರ್ತಿಗೆ ನೋಟಿಸ್ ಜಾರಿ
ಚಂದ್ರಯಾನ-3 ಕುರಿತು ಟೀಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಹುಲಿಕುಂಟೆ ಮೂರ್ತಿ ಅವರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ಶಾಲೆಗೆ ನೋಟಿಸ್ ಜಾರಿ
ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ನಗರದ ಖಾಸಗಿ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.

ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ಸವಾರ ಬಲಿ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪೊಲೀಸರಿಂದ ನೋಟಿಸ್
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುವಾಗ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಸಾವಿಗೀಡಾಗಿರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನೋಟಿಸ್ ನೀಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಹಿಂದೂ ಪರ ಕಾರ್ಯಕರ್ತನಿಗೆ ನೋಟಿಸ್: ಪೊಲೀಸರ ನಡೆಗೆ ಗೃಹ ಸಚಿವ ಪರಮೇಶ್ವರ್ ಸಮರ್ಥನೆ
ಸರ್ಕಾರಿ ಭೂಮಿಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸಿದ ಹಿಂದೂಪರ ಕಾರ್ಯಕರ್ತನಿಗೆ ಪೊಲೀಸರು ನೋಟಿಸ್ ನೀಡಿರುವುದನ್ನು ಗೃಹ ಸಚಿವ ಜಿ ಪರಮೇಶ್ವರ ಅವರು ಬುಧವಾರ ಸಮರ್ಥಿಸಿಕೊಂಡರು.

