notice

ಮಾಜಿ ಸಚಿವ ಸೋಮಣ್ಣ ದೂರು: ವಿಜಯೇಂದ್ರ ಆಪ್ತ ರುದ್ರೇಶ್‌ಗೆ ಬಿಜೆಪಿ ನೋಟಿಸ್
ರಾಮನಗರ ಬಿಜೆಪಿ ಮುಖಂಡರಾಗಿರುವ ರುದ್ರೇಶ್ ಅವರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ, ಎರಡು ದಿನಗಳ ಹಿಂದೆ ನೊಟೀಸ್ ಜಾರಿ ಮಾಡಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ವಿರುದ್ಧ ರುದ್ರೇಶ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಕೇಳಿಬಂದಿತ್ತು

ಬಿಜೆಪಿಯಲ್ಲಿ ಶಿಸ್ತಿನ ಪಾಠ ಕೇವಲ ಬಿಎಸ್'ವೈ ಬ್ರಿಗೇಡ್ ಗೆ ಮಾತ್ರವೇ?... ಬೊಮ್ಮಾಯಿ ವಿರುದ್ಧ ಮಾತನಾಡಿದ ಪ್ರತಾಪ್ ಸಿಂಹಗೇಕಿಲ್ಲ?
ಬಿಜೆಪಿಯಲ್ಲಿ ಶಿಸ್ತಿನ ಪಾಠ ಕೇವಲ ಬಿಎಸ್'ವೈ ಬ್ರಿಗೇಡ್ ಗೆ ಮಾತ್ರವೇ? ಬೊಮ್ಮಾಯಿಯವರ ವಿರುದ್ಧ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಶಿಸ್ತುಕ್ರಮದ ನೋಟಿಸ್ ನೀಡಿಲ್ಲವೇಕೆಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಬೆಂಗಳೂರು ನಿರ್ವಹಣೆಗೆ ಸಮಿತಿ ರಚಿಸದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು ನಿರ್ವಹಣೆಗೆ ಪರಂಪರೆ ಸಂರಕ್ಷಣಾ ಸಮಿತಿ, ಮಹಾನಗರ ಯೋಜನಾ ಸಮಿತಿ ಮತ್ತು ಕುಂದುಕೊರತೆಗಳ ಪರಿಹಾರ ಪ್ರಾಧಿಕಾರ ರಚನೆ ಮಾಡುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ.

ಶಓಮಿ ಸಂಸ್ಥೆ ಖಾತೆ ಜಪ್ತಿ ಪ್ರಕರಣ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
ಚೀನಾದ ಶಓಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಕುರಿತು ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮಾನವ ಹಕ್ಕುಗಳ ಆಯೋಗ ನಿರ್ವಹಿಸದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಕೇಸ್ ಗೆ ಮತ್ತೆ ಟ್ವಿಸ್ಟ್: ನಟಿ ಶೃತಿ ಹರಿಹರನ್ ಗೆ ನೊಟೀಸ್
ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಟ ಅರ್ಜುನ್ ಸರ್ಜಾ ಕೇಸ್ ಗೆ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ.

ಪಿಎಸ್‌ಐ ನೇಮಕಾತಿ ಹಗರಣ: ಅಮೃತ್ ಪೌಲ್ ನ್ಯಾಯಾಂಗ ಬಂಧನ ವಿಸ್ತರಣೆ: ಸಿಐಡಿಗೆ ಹೈಕೋರ್ಟ್ ನೋಟಿಸ್
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ, ನ್ಯಾಯಾಂಗ ಬಂಧನದಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಅಕ್ರಮವಾಗಿ ವಶದಲ್ಲಿ ಇಡಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ಅಪರಾಧ ತನಿಖಾ ದಳಕ್ಕೆ (ಸಿಐಡಿ) ನೋಟಿಸ್ ಜಾರಿ ಮಾಡಿದೆ.

ಕಾಂಗ್ರೆಸ್ 'ವಿಶ್ವದ ಅತ್ಯಂತ ಭ್ರಷ್ಟ ಪಕ್ಷ' ಜಾಹೀರಾತು: ಬಿಜೆಪಿಗೆ ಚುನಾವಣಾ ಆಯೋಗ ನೊಟೀಸ್
ಪತ್ರಿಕೆಗೆ ನೀಡಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆಯೊಳಗೆ "ಪರಿಶೀಲಿಸಬಹುದಾದ ಮತ್ತು ಪತ್ತೆಹಚ್ಚಬಹುದಾದ" ಸಾಕ್ಷ್ಯಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಕರ್ನಾಟಕ ಬಿಜೆಪಿಗೆ ಸೂಚಿಸಿದೆ.

ಧಾರವಾಡ ಪ್ರವೇಶ ನಿರ್ಬಂಧ: ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆ 50 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡುವಂತೆ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.

