notice

ಗೋವಾದಲ್ಲಿ ಐಶಾರಾಮಿ ಬಂಗಲೆ: ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಗೆ ಸರ್ಕಾರದಿಂದ ನೋಟಿಸ್ ಜಾರಿ
ಗೋವಾದ ಮೊರ್ಜಿಮ್ ನಲ್ಲಿರುವ ಐಶಾರಾಮಿ ವಿಲ್ಲಾವನ್ನು ರಾಜ್ಯದ ಸಂಬಂಧಿತ ಅಧಿಕಾರಿಗಳಲ್ಲಿ ನೋಂದಾಯಿಸದೆ ಆನ್ ಲೈನ್ ನಲ್ಲಿ ಹೋಮ್ ಸ್ಟೇ ಎಂದು ಹಾಕಿರುವುದಕ್ಕೆ ಗೋವಾ ಪ್ರವಾಸೋದ್ಯಮ ಇಲಾಖೆ ಕ್ರಿಕೆಟಿಗ ಯುವರಾಜ್ ಸಿಂಗ್ ಗೆ ನೋಟಿಸ್ ಜಾರಿ ಮಾಡಿದೆ .

ಮೈಸೂರಿನಲ್ಲಿ ಗುಂಬಜ್ ಮಾದರಿ ಬಸ್ ನಿಲ್ದಾಣ ವಿವಾದ: ವಾರದೊಳಗೆ ತೆರವುಗೊಳಿಸಿ; ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್
ಮೈಸೂರಿನಲ್ಲಿ ಗುಂಬಜ್ ಮಾದರಿಯಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೂಡಲೇ ವಿವಾದಾತ್ಮಕ ಬಸ್ ನಿಲ್ದಾಣದ ಶೆಲ್ಟರನ್ನು ತೆರವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.

ಮೋರ್ಬಿ ಸೇತುವೆ ಕುಸಿತ ದುರಂತ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಗುಜರಾತ್ ಹೈಕೋರ್ಟ್
ಮೊರ್ಬಿ ಸೇತುವೆ ಕುಸಿತದ ದುರಂತಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಗುಜರಾತ್ ಹೈಕೋರ್ಟ್, ಗುಜರಾತ್ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ನವೆಂಬರ್ 14 ರೊಳಗೆ ಪ್ರಕರಣದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೋಮವಾರ ಸೂಚನೆ ನೀಡಿದೆ.

ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ "ಜಯಭಾರತ ಜನನಿಯ ತನುಜಾತೆ" ಹಾಡಲು ಹೊರಡಿಸಿದ ಆದೇಶದ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವನ್ಯ ಪ್ರಾಣಿಗಳಿಗೆ ವಿದ್ಯುತ್ ಸ್ಪರ್ಶ: ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿದ ಕರ್ನಾಟಕ ಹೈಕೋರ್ಟ್
ರಾಜ್ಯದಲ್ಲಿ ಆನೆಗಳು ಮತ್ತು ಇತರ ಕಾಡು ಪ್ರಾಣಿಗಳ ಸಾವಿಗೆ ಕಾರಣವಾಗುವ ಅಕ್ರಮ ವಿದ್ಯುತ್ ಬೇಲಿಗಳ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.

ಮಹಿಳೆಯರ ಸಂತಾನೋತ್ಪತ್ತಿ ಮೇಲಿನ ವಯಸ್ಸಿನ ನಿರ್ಬಂಧದ ವಿರುದ್ಧ ಮನವಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಗರ್ಭಧಾರಣೆಪೂರ್ವ ಮತ್ತು ಪ್ರಸವಪೂರ್ಣ ವರ್ಗೀಕರಣ ತಂತ್ರಗಳು (ಲಿಂಗ ಆಯ್ಕೆ ನಿಷೇಧ) ಪರೀಕ್ಷೆಗಳನ್ನು ನಡೆಸಲು ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಮೇಲಿನ 35 ವರ್ಷಗಳ ವಯಸ್ಸಿನ ನಿರ್ಬಂಧದ ವಿರುದ್ಧದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದೆ.

ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಗೆ ಬಾಂಬೆ ಹೈಕೋರ್ಟ್ ನೋಟಿಸ್!
ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಶುಕ್ರವಾರ ಬಾಂಬೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಕೇಂದ್ರ, ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ಬಿಲ್ಕಿಸ್ ಬಾನೋ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಕ್ಷಮಾಪಣೆ ನೀಡಿರುವುದನ್ನು ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ: ಇಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು.

