notice

ಆಪತ್ತು ತಂದ ಗುಸು-ಗುಸು ಮಾತು: ವಿ.ಎಸ್. ಉಗ್ರಪ್ಪಗೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಿಂದ ನೊಟೀಸ್!
ಕೆಪಿಸಿಸಿ ಕಚೇರಿಯ ವೇದಿಕೆಯಲ್ಲಿ ಸುದ್ದಿಗೋಷ್ಠಿಗೆ ಮುನ್ನ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅನಧಿಕೃತವಾಗಿ ಮಾತನಾಡಿದ್ದ ಗುಸುಗುಸು ಮಾತು ತಲ್ಲಣ ಉಂಟುಮಾಡಿದ್ದು ವಿ ಎಸ್ ಉಗ್ರಪ್ಪನವರನ್ನು ಸಂಕಷ್ಟಕ್ಕೀಡು ಮಾಡಿದೆ.

ರಾಜ್ಯಪಾಲರ ಹುದ್ದೆಗಾಗಿ ಲಂಚ ಪ್ರಕರಣ: ನಿವೃತ್ತ ನ್ಯಾ. ಇಂದ್ರಕಲಾ ವಿರುದ್ಧದ ತನಿಖೆ- ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ರಾಜ್ಯಪಾಲರ ಹುದ್ದೆ ಪಡೆಯಲು ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಇಂದ್ರಕಲಾ ಲಂಚ ಪಾವತಿ ಮಾಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿ ಕುರಿತು ಕರ್ನಾಟಕ ಹೈಕೋರ್ಟ್ ಈಚೆಗೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯಿಸುವಂತೆ ಆದೇಶಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನಾ ಸಂಸದೆ ಭಾವನಾ ಗವಳಿಗೆ ಇಡಿ ಸಮನ್ಸ್
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನೆ ಸಂಸದೆ ಭಾವನಾ ಗವಳಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ)ನೋಟಿಸ್ ಜಾರಿಮಾಡಿದೆ

ತಾಲಿಬಾನ್- ಆರ್ ಎಸ್ ಎಸ್ ಹೋಲಿಕೆ ಹೇಳಿಕೆಗಾಗಿ ಮೊಕದ್ದಮೆ: ಜಾವೇದ್ ಅಖ್ತರ್ ಗೆ ಥಾಣೆ ಕೋರ್ಟ್ ನೋಟಿಸ್
ತಾಲಿಬಾನ್ ನೊಂದಿಗೆ ಆರ್ ಎಸ್ ಎಸ್ ಹೋಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಬಾಲಿವುಡ್ ಖ್ಯಾತ ಗೀತೆ ರಚನೆಕಾರ, ಕವಿ ಜಾವೇದ್ ಅಖ್ತರ್ ಗೆ ಥಾಣೆಯ ಕೋರ್ಟ್ ಒಂದು ಸೋಮವಾರ ಶೋಕಾಸ್ ನೋಟಿಸ್ ನೀಡಿದೆ.

ರೈತರ ಪ್ರತಿಭಟನೆ ಸಂಬಂಧ 4 ರಾಜ್ಯಗಳ ಸರ್ಕಾರಗಳಿಗೆ ನೋಟೀಸ್ ಕಳಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ರೈತರ ಪ್ರತಿಭಟನೆಯಿಂದಾಗಿ ದೇಶಾದ್ಯಂತ 9,000 ಸಣ್ಣ, ಮಧ್ಯಮ ಮತ್ತು ದೊಡ್ಡ ಕಂಪನಿಗಳಿಗೆ ನಷ್ಟ ಸಂಭವಿಸಿದೆ. ಈ ಬಗ್ಗೆ ತನ್ನ ಬಳಿ ದೂರುಗಳು ಬರುತ್ತಲೇ ಇರುವುದಾಗಿ ಆಯೋಗ ತಿಳಿಸಿದೆ.

ಪೆಗಾಸಸ್ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್; 10 ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚನೆ
ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಂಚನೆ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾಶೆಟ್ಟಿಗೆ ಲಕ್ನೋ ಪೊಲೀಸರಿಂದ ನೋಟೀಸ್
ವೆಲ್ನೆಸ್ ಸೆಂಟರ್ನ ಫ್ರಾಂಚೈಸಿ ಡೀಲ್ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಲಕ್ನೋನಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಕನ್ವರ್ ಯಾತ್ರೆಗೆ ಅವಕಾಶ ನೀಡಿದ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಕೋವಿಡ್ -19 ಆತಂಕದ ನಡುವೆವಲ್ಲೂ ಮುಂದಿನ ವಾರದಿಂದ ಕನ್ವರ್ ಯಾತ್ರೆಗೆ ಅವಕಾಶ ನೀಡುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ನೋಟಿಸ್ ಜಾರಿ ಮಾಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಪ್ರಭಾವಕ್ಕೆ ಒಳಗಾಗದೆ ಆರೋಪಿ ಜಾಮೀನು ಅರ್ಜಿಯನ್ನು ನಿರ್ಧರಿಸಿ- ಸುಪ್ರೀಂ ಕೋರ್ಟ್
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯ ವಿರುದ್ಧ ದಾಖಲಾಗಿದ್ದ ಆರೋಪಗಳನ್ನು ರದ್ದುಗೊಳಿಸಿರುವ ರಾಜ್ಯ ಹೈಕೋರ್ಟ್ನ ಆದೇಶ ಪ್ರಶ್ನಿಸಲಾದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

