ರಾಜ್ಯಖ್ಯಾತ ಬರಹಗಾರ್ತಿ ವೈದೇಹಿಗೆ 'ನೃಪತುಂಗ ಪ್ರಶಸ್ತಿ'; ಐವರಿಗೆ ಮಯೂರ ವರ್ಮ ಪ್ರಶಸ್ತಿ
ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದೊಂದಿಗೆ ನೀಡುವ 2022ನೇ ಸಾಲಿನ ಪ್ರತಿಷ್ಠಿತ ‘ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಖ್ಯಾತ ಬರಹಗಾರ್ತಿ ವೈದೇಹಿ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಜಾನಕಿ ಶ್ರೀನಿವಾಸಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.