oath taking ceremony

ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ಮೋದಿ ಸೇರಿ ಹಲವರು ಭಾಗಿ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಕುಂಕುರಿ ಕ್ಷೇತ್ರದ ಶಾಸಕ ವಿಷ್ಣು ದೇವ್ ಸಾಯಿ ಅವರು ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯ ಬಿಜೆಪಿ ಮುಖ್ಯಸ್ಥ ಅರುಣ್ ಸಾವೊ ಮತ್ತು ಶಾಸಕ ವಿಜಯ್ ಶರ್ಮಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಸಚಿವರ ಪ್ರಮಾಣ ವಚನ: ಇಂದು ರಾಜಭವನ ಸುತ್ತಮುತ್ತ ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ
ಕಾಂಗ್ರೆಸ್ 24 ಮಂದಿ ಶಾಸಕರು ಇಂದು ಶನಿವಾರ ಬೆಳಗ್ಗೆ 11.45ಕ್ಕೆ ಬೆಂಗಳೂರಿನ ರಾಜಭವನದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಂದರ್ಭದಲ್ಲಿ ರಾಜಭವನದ ಸುತ್ತಮುತ್ತ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಸಿದ್ದರಾಮಯ್ಯ ಪರಿಪೂರ್ಣ ಸಂಪುಟ ರಚನೆ: 24 ನೂತನ ಸಚಿವರ ಪ್ರಮಾಣ ವಚನ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು ಶನಿವಾರ 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರಿನಲ್ಲಿ ಕಂಗೊಳಿಸುತ್ತಿವೆ ಗಾಂಧಿ ಕುಟುಂಬ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳು!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬೆಂಗಳೂರಿನಲ್ಲಿ ಗಾಂಧಿ ಕುಟುಂಬ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇರುವ ಪೋಸ್ಟರ್‌ಗಳನ್ನು ಎಲ್ಲೆಡೆ ಹಾಕಲಾಗಿದೆ.

ಸಿದ್ದರಾಮಯ್ಯ, ಶಿವಕುಮಾರ್ ಇಂದು ದೆಹಲಿಗೆ: ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಮಾನ ಮನಸ್ಕ ಪಕ್ಷಗಳ ನಾಯಕರು ಭಾಗಿ
ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ನಾಳೆ ಮೇ 20ರಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ಗೆ ಆಹ್ವಾನ
ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಆಹ್ವಾನಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಪಂಕಜ್ ಮಿಥಲ್, ಸಂಜಯ್ ಕರೋಲ್ ಸೇರಿ ಐವರು ಪ್ರಮಾಣವಚನ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಪಂಕಜ್ ಮಿಥಲ್, ಸಂಜಯ್ ಕರೋಲ್ ಸೇರಿ ಐವರು ಸೋಮವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಹಿಮಾಚಲ ಪ್ರದೇಶ: ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಾನೇಕೆ ಹೋಗಬಾರದು?- ಪ್ರತಿಭಾ ವೀರಭದ್ರ ಸಿಂಗ್
ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುಖ್ವಿಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಅವರನ್ನು ಭೇಟಿಯಾದರು.

ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಡಿಸೆಂಬರ್ 12ಕ್ಕೆ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ಮೋದಿ, ಶಾ ಭಾಗಿ
ರಾಷ್ಟ್ರದಾದ್ಯಂತ ತೀವ್ರ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ದಿಗ್ವಿಜಯದತ್ತ ಮುನ್ನಡೆದಿದ್ದು, ಡಿಸೆಂಬರ್ 12 ರಂದು ನೂತನ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭ ನಡೆಯುವುದು ಖಚಿತವಾಗಿದೆ.

