ದೇಶವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್: ತನಿಖೆಗಾಗಿ ಪಂಜಾಬ್ ಪೊಲೀಸರಿಂದ 3 ಮಹಿಳಾ ಸದಸ್ಯರ ಎಸ್ಐಟಿ ರಚನೆ
ಚಂಡೀಗಢ ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು ರೆಕಾರ್ಡ್ ಮಾಡಿದ್ದಾಳೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಮೂವರು ಮಹಿಳಾ ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಸೋಮವಾರ ತಿಳಿಸಿದ್ದಾರೆ.