Omicron

ಡಿಸೆಂಬರ್ 13 ರಿಂದ ವಿಧಾನಸಭೆ ಚಳಿಗಾಲದ ಅಧಿವೇಶನ: ಶಾಸಕರು, ಸಚಿವಾಲಯ ಸಿಬ್ಬಂದಿಗೆ ಒಮಿಕ್ರಾನ್ ವೈರಸ್ ಚಿಂತೆ
ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ವಿಧಾನಸಭೆ ಅಧಿವೇಶನ ಸಂಬಂಧ ಸಾಕಷ್ಟು ಶಾಸಕರು ಮತ್ತು ವಿಧಾನ ಸೌಧ ಸಿಬ್ಬಂದಿ ಹೊಸ ವೈರಸ್ ಓಮಿಕ್ರಾನ್ ಬಗ್ಗೆ ತೀವ್ರ ಆತಂಕ ವ್ಯಕ್ತ ಪಡಿಸಿದ್ದಾರೆ.

ಕೋವಿಡ್ ಕ್ಲಸ್ಟರ್ ಗಳ ಬಗ್ಗೆ ರಾಜ್ಯ ಸರ್ಕಾರ ವಿಶೇಷ ನಿಗಾ: ಮುಖ್ಯಮಂತ್ರಿ ಬೊಮ್ಮಾಯಿ
ಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ವಿಶ್ವದ ರಾಷ್ಟ್ರಗಳು ತಬ್ಬಿಬ್ಬುಗೊಂಡಿವೆ. ಈ ಮಧ್ಯೆ, ಹೊಸ ರೂಪಾಂತರಿಯಿಂದ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರ, ರಾಜ್ಯದಲ್ಲಿ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಅನ್ನೋದರ ಬಗ್ಗೆ ತೀವ್ರ ನಿಗಾ ಇರಿಸಿದ್ದೇವೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

'ಒಮಿಕ್ರಾನ್' ಈಗಾಗಲೇ ದೇಶವನ್ನು ಪ್ರವೇಶಿಸಿರಬಹುದು: ಜೀನೋಮ್ ಸೀಕ್ವೆನ್ಸಿಂಗ್ ಹೆಚ್ಚಳದ ಅಗತ್ಯವಿದೆ- ಡಾ. ಗಗನ್ ದೀಪ್ ಕಾಂಗ್
ದೇಶದಲ್ಲಿ ಒಮಿಕ್ರಾನ್ ಕೊರೋನಾವೈರಸ್ ರೂಪಾಂತರದ ಬಗ್ಗೆ ಆತಂಕ ಹೆಚ್ಚಾಗಿರುವ ನಡುವೆ, ಇದು ಈಗಾಗಲೇ ದೇಶವನ್ನು ಪ್ರವೇಶಿಸಿರಬಹುದು ಎಂದು ಹೆಸರಾಂತ ಮೈಕ್ರೋ ಬಯೋಲಾಜಿಸ್ಟ್ ಡಾ. ಗಗನ್ ದೀಪ್ ಕಾಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಓಮಿಕ್ರಾನ್ ವೈರಾಣುವಿನ ರೋಗಲಕ್ಷಣಗಳೇನು, ತೀವ್ರತೆ ಎಷ್ಟು?: ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದು ಹೀಗೆ...
ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆ ಕೊರೋನಾ ಹೊಸ ತಳಿಯ ಆತಂಕ ಹಿನ್ನೆಲೆಯಲ್ಲಿ ಸಭೆ ಕರೆದಿದ್ದೇನೆ. ಪ್ರಧಾನ ಕಾರ್ಯದರ್ಶಿಗಳಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳವರೆಗೆ ಸಮಗ್ರವಾಗಿ 5-6 ಗಂಟೆ ಸುದೀರ್ಘ ಸಭೆ ನಡೆಸಿ ಸಮಾಲೋಚನೆ ಮಾಡಲಿದ್ದೇನೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ಶಾಲಾ -ಕಾಲೇಜು ಮುಚ್ಚುವ ನಿರ್ಧಾರ ಸದ್ಯಕ್ಕಿಲ್ಲ : ಸಚಿವ ಬಿ.ಸಿ ನಾಗೇಶ್
ಕೊರೋನಾ ಹೊಸ ತಳಿಯ ಕಾರಣದಿಂದ ರಾಜ್ಯದಲ್ಲಿ ಶಾಲಾ -ಕಾಲೇಜು ಮುಚ್ಚುವ ನಿರ್ಧಾರ ಮಾಡಿಲ್ಲ ಪೋಷಕರು ಈ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಹೇಳಿದ್ದಾರೆ .

ವಿಧಾನಸಭೆ ಅಧಿವೇಶನದ ಮೇಲೂ ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಕರಿನೆರಳು!
ದಕ್ಷಿಣ ಆಫ್ರಿಕಾ ಮೂಲದ ಕೋವಿಡ್ ಹೊಸ ರೂಪಾಂತರ ತಳಿ ಓಮಿಕ್ರಾನ್ ಕರಿನೆರಳು ಇದೀಗ ಡಿಸೆಂಬರ್ 13-24 ರಂದು ನಡೆಯಬೇಕಿದ್ದ ರಾಜ್ಯದ ವಿಧಾನಸಭೆ ಅಧಿವೇಶನದ ಮೇಲೂ ಬಿದ್ದಿದೆ.

ಓಮಿಕ್ರಾನ್ ಆತಂಕ ನಡುವೆ ಕೋವಿಡ್ ಸಕ್ರಿಯ ಪ್ರಕರಣ ಮತ್ತಷ್ಟು ಇಳಿಕೆ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,309 ಹೊಸ ಕೇಸು, 236 ಸಾವು
ಓಮಿಕ್ರಾನ್ ರೂಪಾಂತರಿ ಕೊರೋನಾ ಆತಂಕದ ನಡುವೆ ಭಾರತದಲ್ಲಿ ಸೋಂಕಿನ ಅಬ್ಬರ ನಿನ್ನೆಗಿಂತ ಇಂದು ಸೋಮವಾರ ಮತ್ತಷ್ಟು ಕಡಿಮೆಯಾಗಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 309 ಮಂದಿಯಲ್ಲಿ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 236 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್: ಸೋಂಕು ಪೀಡಿತ ದಕ್ಷಿಣ ಆಫ್ರಿಕಾದ ಪ್ರಯಾಣಿಕರ ವರದಿ ಮರುಪರಿಶೀಲಿಸಲು ಅಧಿಕಾರಿಗಳು ಮುಂದು!
ಬೆಂಗಳೂರಿಗೆ ಬಂದಿಳಿದ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಯಾಣಿಕರಲ್ಲೂ ಪತ್ತೆಯಾಗಿರುವುದು ಡೆಲ್ಟಾ ಮಾದರಿ ಸೋಂಕು ಪತ್ತೆಯಾಗಿದೆ ಹೊರತು ಓಮಿಕ್ರಾನ್ ಅಲ್ಲ ಎಂದು ದೃಢಪಟ್ಟಿದ್ದರೂ ವರದಿಯನ್ನು ಮರುಪರಿಶೀಲನೆ ನಡೆಸಲು ಜೀನೋಮ್ ಸಮಿತಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ವಿಮಾನ ಹಾರಾಟ ನಿರ್ಬಂಧಿಸಿದ 18 ದೇಶಗಳ ವಿರುದ್ಧ ದಕ್ಷಿಣ ಆಫ್ರಿಕಾ ಆಕ್ರೋಶ
ಈ ಬಗೆಯ ಪ್ರತಿಕ್ರಿಯೆಯಿಂದ ಇತರೆ ದೇಶಗಳೊಡನೆ ಪಾರದರ್ಶಕತೆ ಕಾಪಾಡಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

