Omicron

ಕೋವಿಡ್-19: ದೇಶದಲ್ಲಿಂದು ಬರೋಬ್ಬರಿ 1.94 ಲಕ್ಷ ಹೊಸ ಕೇಸ್ ಪತ್ತೆ, 442 ಮಂದಿ ಸಾವು
ಓಮಿಕ್ರಾನ್ ಸೋಂಕು ಭೀತಿ ನಡುವೆಯೇ ದೇಶದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ದೇಶದಲ್ಲಿ 1.68 ಲಕ್ಷ ಹೊಸ ಪ್ರಕರಣ ಪತ್ತೆ, 277 ಮಂದಿ ಸಾವು
ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಹೊಸ ಪ್ರಕರಣ ಪತ್ತೆಯಾಗಿದೆ. ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ.
ಕರ್ನಾಟಕ ಕೋವಿಡ್-19 ಅಪ್ಡೇಟ್: ರಾಜ್ಯದಲ್ಲಿ ದಾಖಲಾದ ಹೊಸ ಕೋವಿಡ್ ಸೋಂಕು ಪ್ರಕರಣಗಳ ಮಾಹಿತಿ
ಕರ್ನಾಟಕ ರಾಜ್ಯದಲ್ಲಿ ಇಂದು ದಾಖಲಾದ ಹೊಸ ಕೋವಿಡ್ ಸೋಂಕು ಪ್ರಕರಣಗಳ ಮಾಹಿತಿ ಇಲ್ಲಿದೆ

ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ ಸಾಧ್ಯತೆ. ಬೆಂಗಳೂರಿನ ರಸ್ತೆಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ.
ಎರಡು ತಿಂಗಳೊಳಗೆ ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಹಿನ್ನೋಟ 2021: ಓಮಿಕ್ರಾನ್ ಗಂಭೀರ ಸ್ವರೂಪದ್ದಲ್ಲ, ಆದರೂ ಆರೋಗ್ಯ ವ್ಯವಸ್ಥೆ ಹಾಳು ಮಾಡುವ ಆತಂಕ; ಫೆಬ್ರವರಿಯಲ್ಲಿ 3ನೇ ಅಲೆ ಸೃಷ್ಟಿ
ದಕ್ಷಿಣ ಆಫ್ರಿಕಾದಲ್ಲಿ ಜನ್ಮತಾಳಿದ ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಗಂಭೀರ ಸ್ವರೂಪದ್ದಲ್ಲ. ಆದರೆ ಅತಿ ವೇಗವಾಗಿ ಹರಡುವುದರಿಂದ ಭಾರತ ಸೇರಿದಂತೆ ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲೂ ಆರೋಗ್ಯ ವ್ಯವಸ್ಥೆಯನ್ನೇ...

ರಾಜ್ಯದಲ್ಲಿ ಇಂದು 23 ಓಮಿಕ್ರಾನ್ ಸೋಂಕು ಪತ್ತೆ, ಆತಂಕದ ನಡುವೆ ಹೊಸ ವರ್ಷಾಚರಣೆಗೆ ಬ್ರೇಕ್
ಕರ್ನಾಟಕ ರಾಜ್ಯದಲ್ಲಿ ಇಂದು 23 ಹೊಸ ಓಮಿಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಹೊಸ ರೂಪಾಂತರದ ಆತಂಕದ ನಡುವೆ ಹೊಸ ವರ್ಷಾಚರಣೆಗೆ ಸರ್ಕಾರ ಬ್ರೇಕ್ ಹಾಕಿದೆ.

ರಾಜಸ್ಥಾನ: ಓಮಿಕ್ರಾನ್‌ನಿಂದ ಚೇತರಿಸಿಕೊಂಡಿದ್ದ ವ್ಯಕ್ತಿ ಸಾವು
ಜೀನೋಮ್ ಸೀಕ್ವೆನ್ಸಿಂಗ್‌ನಲ್ಲಿ ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದ 73 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಉದಯಪುರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಓಮಿಕ್ರಾನ್ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ, ಆರೋಗ್ಯ ಮೂಲಸೌಕರ್ಯಕ್ಕೆ ಸರ್ಕಾರ ಕ್ರಮ: ಸಿಎಂ ಬೊಮ್ಮಾಯಿ
ಕೊರೋನಾ ಡೇಂಜರ್ ಜಿಲ್ಲೆಗಳಲ್ಲಿ ಕರ್ನಾಟಕ ಕೂಡ ಒಂದಾಗಿದ್ದು, ಕೇಂದ್ರ ಸರ್ಕಾರದ ಡೇಂಜರ್ ಪಟ್ಟಿಯಲ್ಲಿ ಕರ್ನಾಟಕ ಸೇರಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮತ್ತು ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ಮೇಲೆ 'ಓಮಿಕ್ರಾನ್' ಕರಿನೆರಳು: ಇಂದು ಸಂಜೆ 6 ರಿಂದ ನಾಳೆ ಮುಂಜಾನೆ 5 ರವರೆಗೆ ನಗರದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಜಾರಿ
ಕೊರೋನಾ ವೈರಸ್ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಕಡಿವಾಣ ಹಾಕಲು ಮುಂದಾಗಿದೆ. ಇದರಂತೆ ಡಿಸೆಂಬರ್ 31ರ ಸಂಜೆ 6ರಿಂದ ಮುಂಜಾನೆ 5ರವರೆಗೆ...

