Opposition parties

'INDIA' ಪದ ಬಳಕೆ ವಿರುದ್ಧ ಅರ್ಜಿ: ಪ್ರತಿಕ್ರಿಯೆ ನೀಡಲು ಸರ್ಕಾರ- ವಿರೋಧ ಪಕ್ಷಗಳಿಗೆ ದೆಹಲಿ ಹೈಕೋರ್ಟ್ ಕೊನೆಯ ಅವಕಾಶ
ಇಂಡಿಯಾ (ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್) ಎಂಬ ಸಂಕ್ಷಿಪ್ತ ರೂಪವನ್ನು ಬಳಸುವುದಕ್ಕೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆ ನೀಡಲು ದೆಹಲಿ ಹೈಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರ ಮತ್ತು ಹಲವಾರು ವಿರೋಧ ಪಕ್ಷಗಳಿಗೆ ಕೊನೆಯ ಅವಕಾಶವನ್ನು ನೀಡಿದೆ.

ಸಿಎಎ ವಿರುದ್ಧದ ಪ್ರತಿಭಟನೆ ಹಿಂಪಡೆಯಲು ವಿರೋಧ ಪಕ್ಷಗಳಿಗೆ ನೋಟಿಸ್; ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಅಸ್ಸಾಂ ಪೊಲೀಸರು
ಪೌರತ್ವ (ತಿದ್ದುಪಡಿ) ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯುವಂತೆ ಅಸ್ಸಾಂ ಪೊಲೀಸರು ವಿರೋಧ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದ್ದು, ಈ ಆದೇಶವನ್ನು ಅನುಸರಿಸಲು ವಿಫಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವುದಾಗಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸಂಸತ್ತಿನಲ್ಲಿ ಭದ್ರತೆ ಲೋಪ: ವಿರೋಧ ಪಕ್ಷಗಳ ಮುಂದುವರಿದ ಪ್ರತಿಭಟನೆ, ರಾಜ್ಯಸಭೆ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ರಾಜ್ಯಸಭೆ ಕಲಾಪವನ್ನು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ. ಸಂಸತ್ತಿನ ಭದ್ರತಾ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಾಗಿ ಪ್ರತಿಪಕ್ಷ ಸಂಸದರು ಇಂದು ಕೂಡ ಒತ್ತಡ ಮುಂದುವರಿಸಿದ್ದಾರೆ.

ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ: ಮುಂದುವರಿದ ವಿರೋಧ ಪಕ್ಷಗಳ ಗದ್ದಲ, ಕೋಲಾಹಲ, ಕಲಾಪ ಮುಂದೂಡಿಕೆ
ಕಳೆದ ವಾರ ಸಂಸತ್ತಿನ ಭದ್ರತೆ ಉಲ್ಲಂಘನೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಮತ್ತು ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯಿಂದಾಗಿ ಲೋಕಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.

ಸಂಸತ್ತು ಭದ್ರತೆ ಉಲ್ಲಂಘನೆ ಪ್ರಕರಣ ಗಂಭೀರ, ಆದರೆ ವಿರೋಧ ಪಕ್ಷಗಳು ರಾಜಕೀಯ ಮಾಡಬಾರದು: ಅಮಿತ್ ಶಾ
ಲೋಕಸಭೆಯಲ್ಲಿ ಮೊನ್ನೆ ಬುಧವಾರ ನಡೆದ ಭದ್ರತಾ ಲೋಪವು ಗಂಭೀರ ಪ್ರಕರಣವಾಗಿದೆ ಎಂದು ಒಪ್ಪಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಘಟನೆಯ ತನಿಖೆಗಾಗಿ ರಚಿಸಲಾದ ಸಮಿತಿಯು ತನ್ನ ವರದಿಯನ್ನು 15-20 ದಿನಗಳಲ್ಲಿ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷಗಳಲ್ಲಿ 'ಭಿನ್ನಾಭಿಪ್ರಾಯ' ಇದೆ, ಆದ್ರೆ ಲೋಕಸಭೆಗೆ ಒಗ್ಗಟ್ಟಾಗಿದ್ದೇವೆ: ಶರದ್ ಪವಾರ್
ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿವೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಹೋರಾಡಬೇಕು ಎಂಬ ಭಾವನೆ ಇದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು...

ವಿಪಕ್ಷಗಳು ತಮ್ಮ ಮೈತ್ರಿಯ ಹೆಸರನ್ನು 'INDIA' ದಿಂದ ‘BHARAT’ ಎಂದು ಬದಲಿಸಿಕೊಳ್ಳಲಿ: ಶಶಿ ತರೂರ್ ಸಲಹೆ
ವಿರೋಧ ಪಕ್ಷಗಳ ಇಂಡಿಯಾ ಬಣವು ತನ್ನ ಹೆಸರನ್ನು 'BHARAT' ಅಂದರೆ 'ಉತ್ತಮಗೊಳಿಸುವಿಕೆ, ಸಾಮರಸ್ಯ ಮತ್ತು ಜವಾಬ್ದಾರಿಯುತ ಪ್ರಗತಿಯ ನಾಳೆಗಾಗಿ ಮೈತ್ರಿ' ಎಂದು ಬದಲಿಸಿಕೊಳ್ಳಲಿ. ಆಗಲಾದರೂ ಆಡಳಿತಾರೂಢ ಬಿಜೆಪಿ ತನ್ನ ದುರಾಸೆಯ ಆಟವನ್ನು ನಿಲ್ಲಿಸಬಹುದು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಬುಧವಾರ ಸಲಹೆ ನೀಡಿದ್ದಾರೆ.

ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿ ವಿವರಿಸುವಂತೆ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒತ್ತಾಯ
ಸೆಪ್ಟೆಂಬರ್ 18 ರಿಂದ 22ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಅಜೆಂಡಾವನ್ನು ವಿವರಿಸಲು ವಿರೋಧ ಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ನಾಯಕರು ಮಂಗಳವಾರ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಪಕ್ಷಗಳ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ: ಎಎಪಿ ಪ್ರಸ್ತಾಪ
ಆಮ್ ಆದ್ಮಿ ಪಕ್ಷವು ಬುಧವಾರ ಅರವಿಂದ ಕೇಜ್ರಿವಾಲ್ ಅವರು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪ್ರಸ್ತಾಪಿಸಿದ್ದು, ದೆಹಲಿ ಮುಖ್ಯಮಂತ್ರಿಯಾಗಿ ಅವರು ಇಡೀ ದೇಶಕ್ಕೆ ಪ್ರಯೋಜನವಾಗುವಂತಹ ಮಾದರಿಯನ್ನು ನೀಡಿದ್ದಾರೆ ಎಂದು ಹೇಳಿದೆ.

