Opposition parties

ಜ.30ರಂದು ಭಾರತ್ ಜೋಡೋ ಯಾತ್ರೆ ಸಮಾರೋಪ: 21 ವಿರೋಧ ಪಕ್ಷಗಳಿಗೆ ಆಹ್ವಾನ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಎನ್ ಡಿಎ ಮೈತ್ರಿಸರ್ಕಾರಕ್ಕೆ ಪ್ರಬಲವಾದ ವಿರೋಧ ಪಕ್ಷ ಇಂದು ದೇಶದಲ್ಲಿ ಇಲ್ಲ, ಪ್ರಬಲ ವಿರೋಧ ಪಕ್ಷದ ಅಗತ್ಯವಿದೆ ಎಂಬ ಮಾತುಗಳು ಆಗಾಗ ಕೇಳಿಬರುತ್ತಲೇ ಇವೆ. ಈ ಮಧ್ಯೆ ಕಾಂಗ್ರೆಸ್ ಗೆ ಹೊಸ ಸಾರಥಿ ಮಲ್ಲಿಕಾರ್ಜುನ ಖರ್ಗೆಯವರ ನೇಮಕವಾಗಿದೆ.

ಚೀನಾ ಗಡಿ ಉದ್ವಿಗ್ನತೆ ಕುರಿತು ಚರ್ಚೆಗೆ ನಕಾರ; ರಾಜ್ಯಸಭೆಯ ದಿನದ ಕಲಾಪವನ್ನು ಬಹಿಷ್ಕರಿಸಿದ ಎಲ್ಲಾ ಪ್ರತಿಪಕ್ಷಗಳು
ಸದನದಲ್ಲಿ ಚೀನಾ ಗಡಿ ಉದ್ವಿಗ್ನತೆ ಕುರಿತಂತೆ ಚರ್ಚೆಗೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಎಲ್ಲಾ ವಿಪಕ್ಷಗಳು ಗುರುವಾರ ರಾಜ್ಯಸಭೆಯ ಕಲಾಪವನ್ನು ಬಹಿಷ್ಕರಿಸಿದವು.

ಚೀನಾ ವಿಚಾರ ಟಿವಿಯಲ್ಲಿ, ಹೊರಗೆ ಚರ್ಚೆ ನಡೆಯುತ್ತಿದೆ; ಸದನದಲ್ಲೂ ಅವಕಾಶಕ್ಕೆ ಒತ್ತಾಯಿಸಿ ಪ್ರತಿಪಕ್ಷಗಳ ಸಭಾತ್ಯಾಗ
ಚೀನಾದೊಂದಿಗಿನ ಗಡಿ ಸಮಸ್ಯೆಯ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ಬುಧವಾರ ಲೋಕಸಭೆ ಸಭಾತ್ಯಾಗ ಮಾಡಿದವು.

ಚೀನಾ ಅತಿಕ್ರಮಣ ಕುರಿತು ಚರ್ಚೆ ತಿರಸ್ಕಾರ; ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳು
ಗಡಿಯಲ್ಲಿ ಚೀನಾ ಅತಿಕ್ರಮಣ ಕುರಿತು ಚರ್ಚೆ ನಡೆಸಬೇಕೆಂಬ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ ಸೋಮವಾರ ವಿರೋಧ ಪಕ್ಷಗಳು ಸದನದಿಂದ ಹೊರನಡೆದವು.

ಖರ್ಗೆ ಭೇಟಿ ಮಾಡಿದ 13 ವಿರೋಧ ಪಕ್ಷದ ನಾಯಕರು; ಸಂಸತ್ತಿನಲ್ಲಿ ಸರ್ಕಾರದ ಮೇಲೆ ಮುಗಿಬೀಳಲು 20 ವಿಚಾರಗಳ ಪಟ್ಟಿ
13 ರಾಜಕೀಯ ಪಕ್ಷಗಳ ನಾಯಕರು ಬುಧವಾರ ಬೆಳಗ್ಗೆ ಸಂಸತ್ತಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿದರು ಮತ್ತು ಉಭಯ ಸದನಗಳಲ್ಲಿ ವಿವಿಧ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ಸುಮಾರು 20 ವಿಚಾರಗಳನ್ನು ಪಟ್ಟಿಮಾಡಿದರು.

ನೋಟು ಅಮಾನ್ಯೀಕರಣಕ್ಕೆ 6 ವರ್ಷ: ಇದು 'ಆರ್ಥಿಕ ನರಮೇಧ', 'ಅಪರಾಧ ಕೃತ್ಯ' ಎಂದು ಕರೆದ ವಿರೋಧ ಪಕ್ಷಗಳು
ನೋಟು ಅಮಾನ್ಯೀಕರಣವನ್ನು 'ಆರ್ಥಿಕ ನರಮೇಧ' ಮತ್ತು 'ಅಪರಾಧ ಕೃತ್ಯ' ಎಂದು ಬಣ್ಣಿಸಿರುವ ವಿರೋಧ ಪಕ್ಷಗಳು, 2016 ರಲ್ಲಿ ನವೆಂಬರ್ 8ರಂದು 500 ಮತ್ತು 1000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ: ಪ್ರತಿಭಟನೆಗೆ ವಿರೋಧ ಪಕ್ಷಗಳು ಸಜ್ಜು
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಈ ಬಗ್ಗೆ ಆಗಾಗ ಚರ್ಚೆಗಳು ಆಗುತ್ತಿರುತ್ತದೆ. ವಿರೋಧ ಪಕ್ಷಗಳು ಸಂಸತ್ತಿನಲ್ಲಿ ತರಾಟೆಗೆ ತೆಗೆದುಕೊಂಡಿದ್ದೂ ಆಗಿದೆ.

'ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಗೂ ಮಾತನಾಡಲು ಬಿಡಿ, ನಿಮ್ಮಲ್ಲಿ ತಾಳ್ಮೆಯಿಲ್ಲದಿದ್ದರೆ ರೋಗಿಗಳಾಗಿಬಿಡುತ್ತೀರಿ': ನಿರ್ಗಮಿತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು
ನಿರ್ಗಮಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸರ್ಕಾರಕ್ಕೆ ಮತ್ತು ವಿರೋಧ ಪಕ್ಷಕ್ಕೆ ಒಂದು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡುವ ತೀರ್ಪುಗಳನ್ನು ಸ್ವೀಕರಿಸುವ ಸಹಿಷ್ಣುತೆ ಬೇಕು. ಸಂಸತ್ತಿನಲ್ಲಿ ಆಡಳಿತ ಪಕ್ಷದಲ್ಲಿರುವ ಸದಸ್ಯರು ವಿರೋಧ ಪಕ್ಷಗಳ ಸದಸ್ಯರು ಮಾತನಾಡಲು, ತಮ್ಮ ಅಭಿಪ್ರಾಯ ಕೊಡಲು ಅವಕಾಶ ನೀಡಬೇಕು ಎಂದಿದ್ದಾರೆ.

ಪ್ರತಿಪಕ್ಷಗಳ ಗಲಾಟೆ: ಮಧ್ಯಾಹ್ನ 2 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ
ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

