Opposition parties

ರಾಜ್ಯಸಭೆಯ 12 ಸಂಸದರ ಅಮಾನತು: ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ಪ್ರತಿಪಕ್ಷಗಳ ಸಭೆ
ಅನುಚಿತ ವರ್ತನೆಯಿಂದಾಗಿ ರಾಜ್ಯಸಭೆಯ 12 ಸದಸ್ಯರನ್ನು ಅಮಾನತು ಮಾಡಲಾಗಿದ್ದು, ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಪ್ರತಿಪಕ್ಷಗಳ ಸಭೆಯನ್ನು ಕರೆಯಲಾಗಿದೆ.

ಜನರ ವಿಶ್ವಾಸ ಗೆಲ್ಲಿ: ಪ್ರತಿಪಕ್ಷಗಳಿಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಒತ್ತಾಯ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಜನರ ವಿಶ್ವಾಸವನ್ನು ಗೆಲ್ಲುವಂತೆ ವಿರೋಧ ಪಕ್ಷಗಳಿಗೆ ಒತ್ತಾಯಿಸಿದ್ದಾರೆ ಮತ್ತು ಎಲ್ಲರೂ ಒಗ್ಗಟ್ಟಿನಿಂದ ಸದೃಢವಾಗಿರುವಂತೆ ಕರೆ ನೀಡಿದ್ದಾರೆ.

ಸಂಸತ್ತಿನಲ್ಲಿ ಇಂತಹ 'ನಕಾರಾತ್ಮಕ ಮನಸ್ಥಿತಿ' ಎಂದಿಗೂ ಕಂಡಿರಲಿಲ್ಲ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಲೋಕಸಭೆ ಮತ್ತು ರಾಜ್ಯಸಭೆಗೆ ಹೊಸದಾಗಿ ಸೇರ್ಪಡೆಗೊಂಡ ಕೇಂದ್ರ ಸಚಿವರನ್ನು ಪರಿಚಯಿಸವ ವೇಳೆ ಗದ್ದಲ ಎಬ್ಬಿಸಿದ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಇಂತಹ 'ನಕಾರಾತ್ಮಕ ಮನಸ್ಥಿತಿ' ಸಂಸತ್ತಿನಲ್ಲಿ ಹಿಂದೆಂದೂ ಕಂಡುಬಂದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಇಲ್ಲದೆ ರಾಷ್ಟ್ರೀಯ ಮಟ್ಟದಲ್ಲಿ ಪ್ರತಿಪಕ್ಷಗಳ ಮೈತ್ರಿ ಅಪೂರ್ಣ: ಶಿವಸೇನೆ ನಾಯಕ ಸಂಜಯ್ ರಾವತ್
ರಾಷ್ಟ್ರಮಟ್ಟದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟು ತರುವ ಪ್ರಯತ್ನ ಸಾಗುತ್ತಿದ್ದು ಕಾಂಗ್ರೆಸ್ ಸೇರದಿದ್ದರೆ ಮೈತ್ರಿ ಅಪೂರ್ಣವಾಗುತ್ತದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಕೋವಿಡ್ ನಡುವೆ ಬಿಜೆಪಿ ಕೆಲಸ ಮಾಡುತ್ತಿದ್ದರೆ ಪ್ರತಿಪಕ್ಷಗಳು ಕ್ವಾರಂಟೈನ್ ನಲ್ಲಿವೆ- ಜೆ. ಪಿ.ನಡ್ಡಾ
ಕೊರೋನಾವೈರಸ್ ಸಾಂಕ್ರಾಮಿಕದ ನಡುವೆಯೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರೆ ಪ್ರತಿಪಕ್ಷಗಳು ಕ್ವಾರಂಟೈನ್ ನಲ್ಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಹೇಳಿದ್ದಾರೆ.

'ಟೀಕಾ ಉತ್ಸವ್' ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ, ಎಲ್ಲರಿಗೂ ಉಚಿತ ಲಸಿಕೆ ನೀಡಿ'
ಕೇರಳ, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರ ಸೇರಿದಂತೆ ಸುಮಾರು 17 ರಾಜ್ಯಗಳು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆಗಳನ್ನು ಘೋಷಿಸುತ್ತಿದ್ದು, ಕರ್ನಾಟಕ ಕೂಡ ಇದೇ ಮಾದರಿ ಅನುಸರಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಸರ್ಕಾರವನ್ನು ಒತ್ತಾಯಿಸಿದೆ.

ರೈತರ ಪ್ರತಿಭಟನೆ ರಾಜಕೀಯ ಪ್ರೇರಿತ, ಕೃಷಿ ಕಾನೂನುಗಳ ಬಗ್ಗೆ ಮಾತುಕತೆಗೆ ಸಿದ್ಧ: ಪ್ರಧಾನಿ ಮೋದಿ
ಕೃಷಿ ಕಾನೂನುಗಳ ಬಗ್ಗೆ ಸುಳ್ಳು ಸುದ್ದಿಗಳು ಮತ್ತು ವದಂತಿಗಳನ್ನು ಹರಡುತ್ತಿರುವುದಕ್ಕಾಗಿ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ನೂತನ ಕೃಷಿ ಕಾನೂನುಗಳ ಬಗ್ಗೆ ರೈತರೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧವಿರುವುದಾಗಿ ಶುಕ್ರವಾರ ಪುನರುಚ್ಚರಿಸಿದ್ದಾರೆ.

ಕೃಷಿ ಕಾಯಿದೆ ವಿರೋಧಿಸಿ ಪ್ರತಿಪಕ್ಷಗಳ ನಾಯಕರಿಂದ ರಾಷ್ಟ್ರಪತಿ ಭೇಟಿ: ಶರದ್ ಪವಾರ್
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯಿದೆಗಳನ್ನು ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಬುಧವಾರ ಸಂಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಿದ್ದೇವೆ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಮಂಗಳವಾರ ಹೇಳಿದ್ದಾರೆ.

ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳಿಗೆ ಈಗ ಪ್ರತಿಪಕ್ಷಗಳ ವಿರೋಧ: ಸಚಿವ ಡಾ. ಕೆ.ಸುಧಾಕರ್
ಈ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷಗಳು ವಿನಾಕಾರಣ ವಿರೋಧಿಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

