opposition

ಅವಿಶ್ವಾಸ ನಿರ್ಣಯ: ಪ್ರಧಾನಿ ಮೋದಿ ಭಾಷಣದ ವೇಳೆ ಪ್ರತಿಪಕ್ಷಗಳಿಂದ ಸಭಾತ್ಯಾಗ
ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಿದ್ದ ವೇಳೆಯೇ ಪ್ರತಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.

ಆಡಳಿತ-ವಿರೋಧ ಪಕ್ಷಗಳ ನಡುವೆ ತಿಕ್ಕಾಟ: ರಾಜಭವನದಲ್ಲಿ ನಿರಂತರ ಚಟುವಟಿಕೆ; ಬ್ಯುಸಿಯಾಗಿರುವ ರಾಜ್ಯಪಾಲರು!
ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಡುವಿನ ಜಿದ್ದಾಜಿದ್ದಿಯು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಕಾರ್ಯನಿರತರಾಗಿರುವಂತೆ ಮಾಡಿದೆ.

ಅಮಿತ್ ಶಾ ಸರಿಯಾದ ಹೇಳಿಕೆ ನೀಡಿದ್ದಾರೆ; ಅಚ್ಚರಿ ಮೂಡಿಸಿದ ಮಮತಾ ಬ್ಯಾನರ್ಜಿ ಸಮರ್ಥನೆ!: ವಿಷಯ ಏನು ಅಂದ್ರೆ...
ವಿಪಕ್ಷಗಳ ಮೈತ್ರಿ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಮರ್ಥಿಸಿದ್ದಾರೆ.

ಎಸ್ಸಿ/ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನವನ್ನು ಇತರ ಉದ್ದೇಶಕ್ಕೆ ಬಳಸಲ್ಲ: ಸರ್ಕಾರ ಸ್ಪಷ್ಟನೆ
ಸರ್ಕಾರ ಯಾವುದೇ ರೀತಿಯಲ್ಲೂ ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣಕ್ಕೆ ಎಂದು ಮೀಸಲಿರಿಸಿದ ಹಣವನ್ನು ಇತರ ಜನ ಸಮುದಾಯಗಳ, ಇತರ ಉದ್ದೇಶಗಳಿಗೆ ಬಳಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ವಿಪಕ್ಷ ಒಕ್ಕೂಟಕ್ಕೆ 'INDIA' ಹೆಸರು ಬಳಕೆ: 26 ರಾಜಕೀಯ ಪಕ್ಷಗಳು, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ
ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (INDIA) ಎಂದು ಹೆಸರಿಟ್ಟಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ 26 ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ವಿಧಾನ ಪರಿಷತ್‌ನಲ್ಲಿ ಐದು ಮಸೂದೆಗಳಿಗೆ ಅಂಗೀಕಾರ
ವಿರೋಧ ಪಕ್ಷದ ಸದಸ್ಯರ ಗೈರುಹಾಜರಿಯ ನಡುವೆಯೇ ಐದು ತಿದ್ದುಪಡಿ ಮಸೂದೆಗಳಿಗೆ ಗುರುವಾರ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆಯಿತು.

ಬಿಜೆಪಿ-ಜೆಡಿಎಸ್ ಸದಸ್ಯರ ಗೈರು: ಪರಿಷತ್ ಕಲಾಪಕ್ಕೆ ಹೆಚ್.ವಿಶ್ವನಾಥ್, ಮರಿತಿಬ್ಬೇಗೌಡ ಹಾಜರು!
ಬಿಜೆಪಿ ಮತ್ತು ಜೆಡಿಎಸ್ ಎಂಎಲ್‌ಸಿಗಳು ಕಲಾಪವನ್ನು ಬಹಿಷ್ಕರಿಸಿದ ಕಾರಣ, ಗುರುವಾರ ಬೆಳಗ್ಗೆ ಸದನದಲ್ಲಿ ಕೋರಂ ಕೊರತೆ ಎದುರಾಯಿತು, ಆದರೆ ಸದನದಲ್ಲಿ ಕೇವಲ ಇಬ್ಬರು ಸದಸ್ಯರೊಂದಿಗೆ ಕಲಾಪ ಪುನರಾರಂಭವಾಯಿತು.

ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ; ಕಾಂಗ್ರೆಸ್'ಗೆ ಆಪ್ ಬೆಂಬಲ
ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರು, ರಾಷ್ಟ್ರೀಯ ಪಕ್ಷದ ನಾಯಕರ ಸ್ವಾಗತಿಸಲು ಐಎಎಸ್ ಅಧಿಕಾರಿಗಳ ನಿಯೋಜನೆ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದೆ.

ಮುಂಗಾರು ಅಧಿವೇಶನ: 31 ಮಸೂದೆಗಳ ಅಂಗೀಕಾರ ಪಡೆಯುವತ್ತ ಕೇಂದ್ರದ ಗಮನ, ವಿಪಕ್ಷಗಳ ಬಳಿ ಇದೆ ಮಹತ್ವದ ರಾಷ್ಟ್ರೀಯ ವಿಷಯಗಳು!
ಮುಂಗಾರು ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ ಪ್ರತಿಪಕ್ಷಗಳ INDIA ಮೈತ್ರಿಕೂಟ ರಚನೆಯಾಗಿದ್ದು, ಕೇಂದ್ರ ಸರ್ಕಾರವನ್ನು ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸದನದಲ್ಲೂ ಒಗ್ಗೂಡಲಿವೆ.

