order

1996 ರ ಕೇಸ್, ವಕೀಲರನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲು ಸಂಚು: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ 20 ವರ್ಷ ಜೈಲು ಶಿಕ್ಷೆ
ವಕೀಲರೊಬ್ಬರನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ 1996ರ ಕೇಸ್ ವೊಂದರಲ್ಲಿ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದ ಸೆಷನ್ಸ್ ನ್ಯಾಯಾಲಯವು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ಭೂ ಸ್ವಾಧೀನ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸುತ್ತಮುತ್ತ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸುತ್ತಲಿನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಬುಧವಾರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ದೇಶನ ನೀಡಲಾಗಿದೆ.

ನಿಗಮ, ಮಂಡಳಿ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್, ಕೆಇಎ ಆದೇಶ!
ರಾಜ್ಯದಲ್ಲಿ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ವಿವಿಧ ನಿಗಮ ಮತ್ತು ಮಂಡಳಿಗಳ ನೇಮಕಾತಿ ಪರೀಕ್ಷೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡ್ರೆಸ್ ಕೋಡ್ ಆದೇಶ ಹೊರಡಿಸಿದೆ.

ಅನ್ನ ಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಅಕ್ಕಿ ಉಚಿತ ವಿತರಣೆ; ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ
ಜುಲೈ 1 ರಿಂದ ಜಾರಿಗೆ ಬರುವಂತೆ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ: ಏಪ್ರಿಲ್ 1 ರಿಂದ ಜಾರಿ
ಬೆಂಗಳೂರು: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದ್ದು, 2023ರ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5, 8ನೇ ತರಗತಿಗೆ ವಾರ್ಷಿಕ ಪರೀಕ್ಷೆ: ಶಿಕ್ಷಣ ಇಲಾಖೆ ಆದೇಶ
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ, ಮೌಲ್ಯಂಕನ ನಡೆಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಪಿಎಫ್‌ಐ ನಿಷೇಧ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)ಅಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

'ಇದು ಸಾರ್ವಜನಿಕ ಆಸ್ತಿ, ಆಯುಕ್ತರದ್ದಲ್ಲ'; ಬಿಡಿಎಗೆ ಛೀಮಾರಿ ಹಾಕಿ ಕಾರ್ಯದರ್ಶಿ, ಉಪ ಕಾರ್ಯದರ್ಶಿ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಮೌಖಿಕ ಆದೇಶ
ಬಿಡಿಎಯಿಂದ ಅಕ್ರಮವಾಗಿ ಪರ್ಯಾಯ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಾರ್ಯದರ್ಶಿ ಮತ್ತು ಉಪ ಕಾರ್ಯದರ್ಶಿ (ಐ) ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಸುಪ್ರೀಂ ಕೋರ್ಟ್ ಮೌಖಿಕ ಆದೇಶ ನೀಡಿದೆ.

