ರಾಜ್ಯವೈದ್ಯರ ಮೇಲೆ ಹಲ್ಲೆ ಪ್ರಕರಣ; ನಾಳೆ ರಾಜ್ಯಾದ್ಯಂತ ಒಪಿಡಿ ಬಂದ್
ಮಿಂಟೊ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಶುಕ್ರವಾರ ರಾಜ್ಯಾದ್ಯಂತ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನು (ಒಪಿಡಿ) ಬಂದ್ ಮಾಡಿ ಪ್ರತಿಭಟಿಸಲು ವೈದ್ಯರು ನಿರ್ಧರಿಸಿದ್ದಾರೆ.