ಕ್ರಿಕೆಟ್ಕೈಗೆ ಗಾಯದಿಂದ ರಾಜಸ್ಥಾನ್ ರಾಯಲ್ಸ್ನ ಬೆನ್ ಸ್ಟೋಕ್ಸ್ ಐಪಿಎಲ್ ನಿಂದ ಹೊರಕ್ಕೆ!
ಪಂಜಾಬ್ ಕಿಂಗ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಕೈಗೆ ಗಾಯ ಮಾಡಿಕೊಂಡಿರುವ ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಪ್ರಸಕ್ತ ಆವೃತ್ತಿಯ ಐಪಿಎಲ್ ನಿಂದ ಹೊರ ಬಿದಿದ್ದಾರೆ. ಪ್ರಾಂಚೈಸಿ ರಾಜಸ್ಥಾನ ರಾಯಲ್ಸ್ ಮಂಗಳವಾರ ಈ ವಿಷಯವನ್ನು ಖಚಿತಪಡಿಸಿದೆ. ಆದಾಗ್ಯೂ, ಸ್ಟೋಕ್ಸ್ ಇಂಗ್ಲೆಂಡ್ ಗೆ ತೆರಳುವ ಮುನ್ನ ಭಾರತದಲ್ಲಿಯೇ ಒಂದು ವಾರ ಉಳಿಯಲಿದ್ದಾರೆ.