oxygen shortage

2ನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾದ ಸಾವುಗಳನ್ನು ಸರ್ಕಾರ ಲೆಕ್ಕಪರಿಶೋಧನೆ ಮಾಡಬೇಕು: ಸಂಸದೀಯ ಸಮಿತಿ
ಕೋವಿಡ್ 2ನೇ ಅಲೆಯ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಉಂಟಾದ ಸಾವುಗಳನ್ನು ಕಂಡುಕೊಳ್ಳಲು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಪರಿಶೀಲಿಸುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ದೇಶದ ಕೇವಲ ಒಂದು ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಂದಾಗಿ 'ಶಂಕಿತ' ಸಾವು ವರದಿ: ಅಧಿಕೃತ
ಕೋವಿಡ್ ಎರಡನೇ ಅಲೆ ವೇಳೆ ಆಮ್ಲಜನಕದ ಕೊರತೆಯಿಂದಾಗಿ ಒಂದು ರಾಜ್ಯ ಮಾತ್ರ ಈವರೆಗೆ 'ಶಂಕಿತ' ಸಾವನ್ನು ವರದಿ ಮಾಡಿದೆ. ಸಂಸತ್ತಿನಲ್ಲಿ ಆಮ್ಲಜನಕದ ಕೊರತೆಯಿಂದ ಸಾವು ವಿಷಯ ಪ್ರಸ್ತಾಪಿಸಿದ ನಂತರ ಕೇಂದ್ರವು ಅಂತಹ ಸಾವು-ನೋವುಗಳ ಬಗ್ಗೆ ದತ್ತಾಂಶವನ್ನು ಕೇಳಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋವಿಡ್ -19 ಎರಡನೇ ಅಲೆ ವೇಳೆ ಆಕ್ಸಿಜನ್ ಕೊರತೆಯಿಂದ ನೂರಾರು ಜನರ ಸಾವು- ಬಿಜೆಪಿ ಶಾಸಕ
ಕೋವಿಡ್-19 ಎರಡನೇ ಅಲೆ ವೇಳೆಯಲ್ಲಿ ಆಕ್ಸಿಜನ್ ಕೊರತೆಯಿಂದ ನೂರಾರು ಜನರು ಸಾವನ್ನಪ್ಪಿರುವುದಾಗಿ ಉತ್ತರ ಪ್ರದೇಶದ ಬಿಜೆಪಿಯ ಶಾಸಕರೊಬ್ಬರು ಹೇಳಿದ್ದಾರೆ.

'ಆಕ್ಸಿಜನ್ ಕೊರತೆಯಿಂದ ದೇಶದಲ್ಲಿ ಯಾರೊಬ್ಬರೂ ಸತ್ತಿಲ್ಲ': ಕೇಂದ್ರದ ಹೇಳಿಕೆ ವಿರುದ್ಧ ದೆಹಲಿ ಆರೋಗ್ಯ ಸಚಿವ ತೀವ್ರ ಕಿಡಿ
ಆಕ್ಸಿಜನ್ ಕೊರತೆಯಿಂದ ದೇಶದಲ್ಲಿ ಯಾರೊಬ್ಬರೂ ಸತ್ತಿಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆ ವಿರುದ್ಧ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಮತ್ತೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮನೀಶ್ ಮೌದ್ಗೀಲ್ ಎಚ್ಚರಿಕೆ
ಮೇ 24 ಮತ್ತು 24 ರಂದು ರಾಜ್ಯದಲ್ಲಿ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಆಕ್ಸಿಜನ್ ನೋಡಲ್ ಅಧಿಕಾರಿ ಮನೀಶ್ ಮೌದ್ಗಿಲ್ ಹೇಳಿದ್ದಾರೆ.

ಪಿಎಂ ಕೇರ್ಸ್ ನಿಧಿ ಮೂಲಕ 322.5 ಕೋಟಿ ವೆಚ್ಚದಲ್ಲಿ ಡಿಆರ್‌ಡಿಒ ಅಭಿವೃದ್ಧಿಪಡಿಸಿದ 1.5 ಲಕ್ಷ ಆಕ್ಸಿಕೇರ್ ಯುನಿಟ್ ಖರೀದಿ!
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಭಿವೃದ್ಧಿಪಡಿಸಿದ 1.5 ಲಕ್ಷ ಯುನಿಟ್‌ಗಳ 'ಆಕ್ಸಿಕೇರ್' ವ್ಯವಸ್ಥೆಯನ್ನು 322.5 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಪಿಎಂ ಕೇರ್ಸ್ ಫಂಡ್ ಅನುಮತಿ ನೀಡಿದೆ.

ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಅಸಮರ್ಪಕ ನಿರ್ವಹಣೆಯೇ ಕಾರಣ: ಹೈಕೋರ್ಟ್ ಗೆ ತಜ್ಞರ ಸಮಿತಿ ವರದಿ
ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮೇ 2 ರ ಮಧ್ಯರಾತ್ರಿ ಸಂಭವಿಸಿದ 24 ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ಸಲ್ಲಿಸಿದೆ.

ಆಕ್ಸಿಜನ್ ಕೊರತೆ: ಚಾಮರಾಜನಗರ ಸರ್ಕಾರಿ ಅಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವು!
ಮೇ 2ರ ದುರಂತದಿಂದಾಗಿ ತೀವ್ರ ಆತಂಕಕ್ಕೆ ಒಳಗಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಬೆಂಗಳೂರು: 100 ರೋಗಿಗಳಿಗೆ ಆಕ್ಸಿಜನ್ ಕೊರತೆ, ಕಣ್ಣೀರು ಹಾಕಿದ ಖಾಸಗಿ ಆಸ್ಪತ್ರೆ ಸಿಇಒ!
ರಾಜಧಾನಿ ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಆಕ್ಸಿಜನ್ ಸಹಿತ ಹಾಸಿಗೆಗಳು ದೊರೆಯದ ರೋಗಿಗಳು ಅಥವಾ ಅವರ ಕುಟುಂಬಸ್ಥರು ಮಾತ್ರ ಕಣ್ಣೀರು ಹಾಕುತ್ತಿಲ್ಲ. ಆದರೆ, ಆಸ್ಪತ್ರೆಯ ಮುಖ್ಯಸ್ಥರು ಕೂಡಾ ತೀವ್ರ ಒತ್ತಡದಲ್ಲಿದ್ದಾರೆ.

