Oxygen supply

Jalandhar: ಆಮ್ಲಜನಕ ಪೂರೈಕೆಯಲ್ಲಿ ದೋಷ; ಸಿವಿಲ್ ಆಸ್ಪತ್ರೆ ಐಸಿಯುನಲ್ಲಿದ್ದ ಮೂವರು ರೋಗಿಗಳು ಸಾವು
ಆಸ್ಪತ್ರೆಯ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ಕಾರಣ ತಮ್ಮ ಪ್ರೀತಿಪಾತ್ರರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

ಆಂಧ್ರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳ ಸಾವು
ಆಂಧ್ರಪ್ರದೇಶದ ನೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದ್ದು, ಸಾವಿಗೆ ಆಮ್ಲಜನಕದ ಕೊರತೆಯೇ ಕಾರಣ ಎಂಬ ಆರೋಪಗಳು ಕೇಳಿ ಬಂದಿವೆ.

ಮೈಸೂರು ಹಾಗೂ ನೆರೆಹೊರೆಯ ಜಿಲ್ಲೆಗಳಿಗೆ ಸರ್ಕಾರದಿಂದಲೇ ಆಕ್ಸಿಜನ್ ಹಂಚಿಕೆ: ಸಚಿವ ಎಸ್.ಟಿ. ಸೋಮಶೇಖರ್
ಆಕ್ಸಿಜನ್ ಸಮಸ್ಯೆ ನಿವಾರಣೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಹಂಚಿಕೆ ಮಾಡಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ 11 ರೋಗಿಗಳು ಸಾವು; ಆಕ್ಸಿಜನ್ ಕೊರತೆ ಕಾರಣ ಅಲ್ಲ ಎಂದ ಅಧಿಕಾರಿಗಳು!
ದೇಶದ ಹಲವು ಕಡೆ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಅನೇಕ ರೋಗಿಗಳು ಮೃತಪಟ್ಟ ಘಟನೆಗಳ ನಡುವೆಯೇ ಚೆಂಗಲ್‍ಪಟ್ಟು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯಿಂದ 11 ರೋಗಿಗಳು ಸಾವನ್ನಪ್ಪಿದ್ದಾರೆ.

ಆಂಧ್ರ ಪ್ರದೇಶದಲ್ಲೂ ಮರುಕಳಿಸಿದ ಆಕ್ಸಿಜನ್ ಕೊರತೆ ದುರಂತ; ಹಿಂದೂಪುರ ಆಸ್ಪತ್ರೆಯಲ್ಲಿ 8 ರೋಗಿಗಳ ಸಾವು
ಕರ್ನಾಟಕದ ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ಕೊರತೆ ದುರಂತ ಹಸಿರಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲೂ ಇಂತಹುದೇ ಘಟನೆ ಮರುಕಳಿಸಿದ್ದು, ಆಕ್ಸಿಜನ್ ಕೊರತೆಯಿಂದಾಗಿ 8 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಆಮ್ಲಜನಕ ಪೂರೈಕೆ ಸರಪಳಿ ವಿಸ್ತರಿಣೆಗೆ ಜೋ ಬೈಡನ್ ಆಡಳಿತ ಕಾರ್ಯಪ್ರವೃತ್ತ: ಯುಎಸ್‌ಐಐಡಿ
ಭಾರತಕ್ಕೆ ತೀವ್ರ ಅಗತ್ಯವಿರುವ ಜೀವ ಉಳಿಸುವ ಆಮ್ಲಜನಕವನ್ನು ಪೂರೈಸುವ ಸಲುವಾಗಿ ಆಮ್ಲಜನಕ ಪೂರೈಕೆ ಸರಪಳಿಯನ್ನು ವಿಸ್ತರಿಸಲು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಆಡಳಿತ ಕಾರ್ಯನಿರ್ವಹಿಸುತ್ತಿದೆ ಎಂದು ಯುಎಸ್ಎಐಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳ ಖರೀದಿ: ಪ್ರಧಾನಿ ಮೋದಿ
ಪಿಎಂ ಕೇರ್ಸ್ ಫಂಡ್‌ನಿಂದ ಸರ್ಕಾರವು ಒಂದು ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲಿದ್ದು 500 ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ ಆಕ್ಸಿಜನ್ ಪ್ಲಾಂಟ್‌ಗಳನ್ನು ಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಆಮ್ಲಜನಕ ಪೂರೈಕೆಗೆ ಅಡ್ಡಿ ಪಡಿಸಿದರೆ ಗಲ್ಲಿಗೇರಿಸುತ್ತೇವೆ: ದೆಹಲಿ ಹೈಕೋರ್ಟ್ ಎಚ್ಚರಿಕೆ
ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಆಡಳಿತದ ಯಾವುದೇ ಅಧಿಕಾರಿ ಆಮ್ಲಜನಕ ಪೂರೈಕೆಗೆ ಅಡ್ಡಿ ಉಂಟುಮಾಡಿದರೆ, ಅಂತಹ ವ್ಯಕ್ತಿಯನ್ನು ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಪಿಎಂ ಕೇರ್ಸ್ ಫಂಡ್ ನಿಂದ ಆಕ್ಸಿಜನ್ ಒದಗಿಸಲು ದೇಶಾದ್ಯಂತ ವಿಶೇಷ ಅಭಿಯಾನ: ಗೃಹ ಸಚಿವ ಅಮಿತ್ ಶಾ
ಪಿಎಂ ಕೇರ್ಸ್ ಫಂಡ್ ನಿಂದ ಆಸ್ಪತ್ರೆಗಳಿಗೆ ಕೋವಿಡ್-19 ಸೋಂಕಿತರಿಗೆ ಆಕ್ಸಿಜನ್ ನ್ನು ತುರ್ತಾಗಿ ನೀಡಲು ವಿಶೇಷ ಅಭಿಯಾನವನ್ನು ದೇಶಾದ್ಯಂತ ಆರಂಭಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

