oxygen

ಆಕ್ಸಿಜನ್ ಕೊರತೆ ನೀಗಿಸಲು ಸ್ಟೀಲ್ ಕಂಪೆನಿಗಳಿಂದ ಆಕ್ಸಿಜನ್ ಪಡೆಯಲು ನಿರ್ಧಾರ: ಮುರುಗೇಶ್ ನಿರಾಣಿ
ರಾಜ್ಯದಲ್ಲಿ ಕೊರೋನಾ ರೋಗಿಗಳಿಗೆ ಆಕ್ಸಿಜನ್ ಕೊರತೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಅವರು ಬುಧವಾರ ಸ್ಟೀಲ್ ಕಂಪನಿಗಳ ಜೊತೆ ಸಭೆ ನಡೆಸಿದರು.

ಉತ್ತರ ಪ್ರದೇಶದಲ್ಲಿ 10 ಸಾವಿರ ಗಡಿ ದಾಟಿದ ಕೋವಿಡ್ ಸಾವಿನ ಸಂಖ್ಯೆ: ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್ ಕೊರತೆ
ಉತ್ತರ ಪ್ರದೇಶ ರಾಜ್ಯದಲ್ಲಿ ಕೋವಿಡ್-19ಗೆ ಮೃತಪಟ್ಟವರ ಸಂಖ್ಯೆ 10 ಸಾವಿರದ ಗಡಿ ದಾಟಿದ್ದು ನಿನ್ನೆ ಒಂದೇ ದಿನ 162 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಒಂದೇ ದಿನ 29 ಸಾವಿರದ 754 ಹೊಸ ಕೇಸುಗಳು ಪತ್ತೆಯಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಾರೆ.

ಸರಿಯಾದ ಯೋಜನೆ, ಕಾರ್ಯತಂತ್ರಗಳಿಲ್ಲದೆ ರೆಮೆಡಿಸಿವಿರ್, ಆಕ್ಸಿಜನ್ ಕೊರತೆಯಾಗಿದೆ, ಇದು ಸರ್ಕಾರದ ವೈಫಲ್ಯ: ಪ್ರಿಯಾಂಕಾ ಗಾಂಧಿ
ಭಾರತದಲ್ಲಿ ಆಕ್ಸಿಜನ್ ಉತ್ಪಾದನೆ ವಿಶ್ವದಲ್ಲಿಯೇ ಬೃಹತ್ ಪ್ರಮಾಣದಲ್ಲಿದೆ. ಹೀಗಿರುವಾಗ ಕೊರತೆ ಏಕೆ ಉಂಟಾಗುತ್ತಿದೆ. ಕೊರೋನಾ ಮೊದಲ ಅಲೆ ಭಾರತದಲ್ಲಿ ಕಾಣಿಸಿಕೊಂಡು ಕಡಿಮೆಯಾಗಿ ಎರಡನೇ ಅಲೆ ಎದ್ದ ಮಧ್ಯೆ 8 ರಿಂದ 9 ತಿಂಗಳು ಸಮಯವಿತ್ತು.

ಕೋವಿಡ್-19: ರಾಜ್ಯದಲ್ಲಿ ಇನ್ನು ಮುಂದೆ ಆಮ್ಲಜನಕ ಕೊರತೆ ಎದುರಾಗುವುದಿಲ್ಲ!
ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು ಪೂರೈಕೆ ಮಾಡಲು ಜೆಎಸ್‍ಡಬ್ಲ್ಯೂ ಸ್ಟೀಲ್ ಕಂಪನಿ (ಜಿಂದಾಲ್) ಒಪ್ಪಿಗೆ ನೀಡಿದ್ದು, ಇದರಿಂದ ಇನ್ನು ಮುಂದೆ ರಾಜ್ಯದಲ್ಲಿ ಆಮ್ಲಜನಕ ಕೊರತೆ ಎದುರಾಗುವುದಿಲ್ಲ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ಆಮ್ಲಜನಕದ ತೀವ್ರ ಬಿಕ್ಕಟ್ಟು: ಸಿಎಂ ಅರವಿಂದ್ ಕೇಜ್ರಿವಾಲ್
ನಗರದ ಕೆಲವು ಆಸ್ಪತ್ರೆಗಳಲ್ಲಿ ಕೆಲವೇ ಗಂಟೆಗಳ ವೈದ್ಯಕೀಯ ಆಮ್ಲಜನಕ ಉಳಿದಿರುವ ಕಾರಣ ತಕ್ಷಣವೇ ಆಮ್ಲಜನಕವನ್ನು ಪೂರೈಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಉದ್ಯಮಿ ಮುಕೇಶ್ ಅಂಬಾನಿಯ ರಿಲಯನ್ಸ್ ನಿಂದ 700 ಟನ್ ಆಕ್ಸಿಜನ್ ತಯಾರಿಕೆ
ಕೋವಿಡ್-19 ತೀವ್ರ ಬಾಧಿತ ರಾಜ್ಯಗಳಿಗೆ ಉಚಿತವಾಗಿ ವೈದ್ಯಕೀಯ ಆಕ್ಸಿಜನ್ ಪೂರೈಸುವುದಕ್ಕಾಗಿ ಉದ್ಯಮಿ ಮುಕೇಶ್ ಅಂಬಾನಿ ಅವರ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ದಿನವೊಂದಕ್ಕೆ ಸುಮಾರು 700 ಟನ್ ಆಕ್ಸಿಜನ್ ತಯಾರಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದಲ್ಲಿ ಆಮ್ಲಜನಕ ಅಭಾವ: ಆರೋಗ್ಯ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಪೂರೈಕೆದಾರರಿಗೆ ಸರ್ಕಾರ ಸೂಚನೆ
ರಾಜ್ಯದಲ್ಲಿ ಒಂದೆಡೆ ಕೊರೋನಾ ಆರ್ಭಟಿಸುತ್ತಿದ್ದರೆ, ಮತ್ತೊಂದೆಡೆ ರೋಗಿಗಳ ಚಿಕಿತ್ಸೆಗೆ ಪ್ರಮುಖವಾಗಿರುವ ಆಮ್ಲಜನಕ ಅಭಾವ ಎದುರಾಗಿದೆ. ಹೀಗಾಗಿ ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ಆಮ್ಲಜನಕ ಕೊರತೆ: ಬಳ್ಳಾರಿ -ವಿಜಯನಗರದ ಆಕ್ಸಿಜನ್ ಘಟಕಗಳ ಮೊರೆ ಹೋದ ಇತರೆ ರಾಜ್ಯಗಳು
ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ದೇಶದ ಹಲವು ರಾಜ್ಯಗಳು ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಮೊರೆ ಹೋಗಿವೆ.

ದೆಹಲಿಯಲ್ಲಿ ಕೈಮೀರಿ ಹೋಗುತ್ತಿದೆ ಕೊರೋನಾ ಸೋಂಕು: ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆ; ಸಿಎಂ ಕೇಜ್ರಿವಾಲ್ ಆತಂಕ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ನಿಯಂತ್ರಣ ಮೀರಿ ಹರಡುತ್ತಿದೆ. ಈ ಸಂಬಂಧ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಗಳು ಮತ್ತು ಆಕ್ಸಿಜನ್ ಪೂರೈಕೆ ಕೊರತೆ ತೀವ್ರವಾಗಿದೆ ಎಂದಿದ್ದಾರೆ.

