P Chidambaram

ಐಎನ್‌ಎಕ್ಸ್ ಮೀಡಿಯಾ ಕೇಸ್: ಚಿದಂಬರಂಗೆ ಜಾಮೀನು ನಕಾರ, ಸಾಕ್ಷಿಗಳನ್ನು ಪ್ರಭಾವಿಸಬಹುದು ಎಂದ ನ್ಯಾಯಾಲಯ
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಪಿ ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಮಾಜಿ ಹಣಕಾಸು ಸಚಿವ ಚಿದಂಬರಂ ಅವರಿಗೆ ಜಾಮೀನು ನಿಡಿದ್ದಾದರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಕೋರ್ಟ್ ಹೇಳಿದೆ.

ಚಿದಂಬರಂ-ಇಂದ್ರಾಣಿ ಭೇಟಿ ಸತ್ಯ, ಆದರೆ ಸಾಕ್ಷ್ಯ ನಾಶಪಡಿಸಲಾಗಿದೆ: ಸಿಬಿಐ
ಅಕ್ರಮ ಹಣ ವರ್ಗಾವಣೆ ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಇಂದ್ರಾಣಿ ಮುಖರ್ಜಿ ಅವರನ್ನು ಭೇಟಿಯಾಗಿದ್ದು ನಿಜ. ಆದರೆ ಈ ಕುರಿತ ದಾಖಲೆಗಳನ್ನು ನಾಶ ಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇಂದ್ರಾಣಿ ಮುಖರ್ಜಿಯನ್ನು ಭೇಟಿಯಾಗಿಲ್ಲ: ಕೋರ್ಟ್ ಗೆ ಚಿದಂಬರಂ ಹೇಳಿಕೆ
ತಾವು ಎಂದಿಗೂ ಇಂದ್ರಾಣಿ ಮತ್ತು ಪೀಟರ್ ಮುಖರ್ಜಿ ಅವರನ್ನು ಭೇಟಿಯಾಗಿಯೇ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಅ.3ರ ವರೆಗೆ ವಿಸ್ತರಣೆ
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 3ರ ವರೆಗೆ ವಿಸ್ತರಿಸಲಾಗಿದೆ.

ನಾನು ಇನ್ನೂ 74 ವರ್ಷದ ಯುವಕ; ಪಿ ಚಿದಂಬರಂ
ಹಿತೈಷಿಗಳ ಹಾರೈಕೆಯಿಂದ ನಾನು ಇನ್ನೂ 74 ವರ್ಷದ ಯುವಕನೆಂದು ನನಗೆ ಭಾಸವಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಭ್ರಷ್ಟಾಚಾರ ಆರೋಪದಲ್ಲಿ ಜೈಲಿನಲ್ಲಿರುವ ಪಿ ಚಿದಂಬರಂ ಹೇಳಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣ: ದೆಹಲಿ ಕೋರ್ಟ್ ನಿಂದ ಚಿದಂಬರಂ ಜಾಮೀನು ಅರ್ಜಿ ವಜಾ
ಐಎನ್‌ಎಕ್ಸ್ ಮೀಡಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಜಾಮೀನು ಕೋರಿ ದೆಹಲಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಐಎನ್ಎಕ್ಸ್ ಮೀಡಿಯಾ ಕೇಸು; ಸಿಬಿಐಗೆ ನೊಟೀಸ್ ಜಾರಿ ಮಾಡಿದ ಹೈಕೋರ್ಟ್
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಕೇಸಿನಲ್ಲಿ ತಿಹಾರ ಜೈಲು ಸೇರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಅವರ ಅರ್ಜಿ ಬಗ್ಗೆ ದೆಹಲಿ ಹೈಕೋರ್ಟ್ ಸಿಬಿಐ ಪ್ರತಿಕ್ರಿಯೆ ಕೇಳಿದೆ.

ಐಎನ್ಎಕ್ಸ್ ಮೀಡಿಯಾ ಕೇಸಿನಲ್ಲಿ ಯಾವೊಬ್ಬ ಅಧಿಕಾರಿಯನ್ನೂ ಬಂಧಿಸಬೇಡಿ; ಚಿದಂಬರಂ ಟ್ವೀಟ್!
ಐಎನ್ ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಪಟ್ಟಂತೆ ಜೈಲಿನಲ್ಲಿರುವ ಕಾಂಗ್ರೆಸ್ ನ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ, ಈ ವಿಷಯದಲ್ಲಿ ಯಾವೊಬ್ಬ ಅಧಿಕಾರಿಯೂ ಏನೂ ತಪ್ಪು ಮಾಡಿಲ್ಲ. ಹೀಗಾಗಿ ಯಾರನ್ನೂ ಬಂಧಿಸುವುದು ಬೇಡ ಎಂದು ಹೇಳಿದ್ದಾರೆ.

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ವಿಚಾರಣೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಒಳಗೊಂಡ ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಹಾಗೂ ಅವರ ಪುತ್ರನ ವಿಚಾರಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ದೆಹಲಿ ನ್ಯಾಯಾಲಯ ಆದೇಶಿಸಿದೆ. ಇಡಿ ಹಾಗೂ ಸಿಬಿಐ ಪ್ರಕರಣ ಮುಂದೂಡುವಂತೆ ಪದೇ ಪದೇ ಮನವಿ ಮಾಡಿರುವುದು ಇದಕ್ಕೆ ಕಾರಣವೆನ್ನಲಾಗಿದೆ.

