ರಾಜ್ಯದೇಶ ಹಾಳು ಮಾಡಿದ್ದು ವೇದ-ಉಪನಿಷತ್ತು: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಭಾಷಣ; ಡ್ಯಾಮೇಜ್ ಕಂಟ್ರೋಲ್ಗೆ ಮುಂದಾದ ಕಾಂಗ್ರೆಸ್
ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಪ್ರಗತಿಪರ ಚಿಂತಕ ಪ. ಮಲ್ಲೇಶ್ ಅವರು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದೆ. ಬ್ರಾಹ್ಮಣ ಸಮುದಾಯದ ವಿರುದ್ಧ ಪ. ಮಲ್ಲೇಶ್ ಅವರು ಹೇಳಿಕೆ ನೀಡಿರುವುದು ಪ್ರತಿಭಟನೆಗೆ ಕಾರಣವಾಗಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.