ರಾಜ್ಯಮಳೆಗಾಲ: ಪ್ರವಾಸಿಗರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಕೆಎಸ್ಆರ್ಟಿಸಿ
ಮಳೆಗಾಲ ಆರಂಭವಾಗಿದ್ದು, ಪ್ರವಾಸ ಮಾಡಲು ಇಷ್ಟಪಡವವರಿಗಂತೂ ಇದೊಂದು ಅತ್ಯುತ್ತಮ ಕಾಲವಾಗಿದೆ. ಅನ್ಲಾಕ್ ಘೋಷಣೆಯಾದ ಬಳಿಕವಂತೂ ಸಂಚಾರ ನಡೆಸುವ ಜನರ ಸಂಖ್ಯೆಯೂ ಹೆಚ್ಚಾಗಿದೆ. ಅದರಲ್ಲೂ ಮಳೆಗಾಲದಲ್ಲಿ ಜನರು ಹೆಚ್ಚಾಗಿ ಪ್ರವಾಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಹಲವಾರು ಪ್ಯಾಕೇಜ್ಗಳನ್ನು ಘೋಷಣೆ ಮಾಡಿದೆ.