Padarayanapura

ಪಾದರಾಯನಪುರ ಗಲಭೆ ಪ್ರಕರಣ: ರಾಮನಗರ ಜೈಲಲ್ಲಿರುವ 3 ಆರೋಪಿಗಳಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ
ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿ, ರಾಮನಗರ ಜೈಲು ಸೇರಿರುವ 54 ಆರೋಪಿಗಳ ಪೈಕಿ ಇದೀಗ ಮತ್ತೆ ಮೂವರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ.

ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: ಮತ್ತೆ 60 ಮಂದಿ ಬಂಧನ- ಸರ್ಕಾರ ಮಾಹಿತಿ
ರಾಜಧಾನಿಯ ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 60 ಮಂದಿಯನ್ನು ಬಂಧನಕ್ಕೊಳಪಡಿಸಿಲಾಗಿದೆ.

ಪಾದರಾಯನಪುರ ಘಟನೆ: 119 ಮಂದಿಯ ಬಂಧನ, ರಾಮನಗರ ಕಾರಾಗೃಹಕ್ಕೆ ಸ್ಥಳಾಂತರ- ಗೃಹ ಸಚಿವ ಬಸವರಾಜ ಬೊಮ್ಮಾಯಿ
ಪಾದರಾಯನಪುರ ಘಟನೆಗೆ ಸಂಬಂಧಿಸಿ ಇದುವರೆಗೆ 119 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯದ ಆದೇಶದ ಪ್ರಕಾರ ಅವರನ್ನೆಲ್ಲಾ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪಾದರಾಯನಪುರದಲ್ಲಿ ಗರುಡ ಭದ್ರತೆ: ಗಲ್ಲಿ ಗಲ್ಲಿಗಳಲ್ಲಿ ಕಮಾಂಡೋಗಳ ಗಸ್ತು!
ಪಾದರಾಯನಪುರ ದಲ್ಲಿ ಭಾನುವಾರ ರಾತ್ರಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು ಮೇಲೆ ಹಲ್ಲೆ ನಡೆದ ಘಟನೆಯ ಬಳಿಕ ಪಾದರಾಯನಪುರದಲ್ಲಿ ಗರುಡ ತಂಡ ಭದ್ರತೆ ಕೈಗೊಂಡಿದ್ದು, ಇಡೀ ಪ್ರದೇಶ ಸಂಪೂರ್ಣ ಸೀಲ್‌ಡೌನ್ ಆಗಿದೆ.

ಪಾದರಾಯನಪುರ ಹಲ್ಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ನಗರದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಸರ್ಕಾರದ ಕೆಲಸಕ್ಕೆ ಇವರ ಅನುಮತಿ ಪಡೆಯಬೇಕೇ..?; ಶಾಸಕ ಜಮೀರ್ ಅಹ್ಮದ್ ವಿರುದ್ಧ ಸಿಎಂ ಬಿಎಸ್ ವೈ ಕಿಡಿ
ಪಾದರಾಯನಪುರದಲ್ಲಿ ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಿಡಿಕಾರಿದ್ದಾರೆ.

ಕ್ವಾರಂಟೈನ್ ಮಾಡಲು ರಾತ್ರಿ ಏಕೆ ಹೋದ್ರು, ಬೆಳಗ್ಗೆ ಬರಬೇಕಿತ್ತು: ಶಾಸಕ ಜಮೀರ್ ಅಹ್ಮದ್ ಖಾನ್
ಕೊರೋನಾ ವೈರಸ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ಪೊಲೀಸರು ರಾತ್ರಿ ಏಕೆ ಪಾದರಾಯನಪುರಕ್ಕೆ ಹೋದ್ರು.. ಬೆಳಗ್ಗೆ ಬರಬೇಕಿತ್ತು ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಪಾದರಾಯನಪುರ ದುಷ್ಕೃತ್ಯದಲ್ಲಿ ತೊಡಗಿದ್ದವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಿ: ಸಿದ್ದರಾಮಯ್ಯ ಒತ್ತಾಯ
ಪಾದರಾಯನಪುರದಲ್ಲಿ ಕರ್ತವ್ಯನಿರತ ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: 59 ಜನರ ಬಂಧನ, 5 ಎಫ್ಐಆರ್, ಘಟನಾ ಸ್ಥಳಕ್ಕೆ ಗೃಹ ಸಚಿವರ ಭೇಟಿ
ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 59 ಮಂದಿಯನ್ನು ಬಂಧಿಸಲಾಗಿದ್ದು, 5 ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

