ಸಿನಿಮಾ ಸುದ್ದಿಯಾವುದದು ಪ್ಯಾನ್ ಇಂಡಿಯಾ? ನಮ್ಮ ಹೊಟ್ಟೆ ತುಂಬಿಸಲ್ಲ: ನವರಸ ನಾಯಕ ಜಗ್ಗೇಶ್ ಕಿಡಿ
'ಯಾವುದು ಅದು ಪ್ಯಾನ್ ಇಂಡಿಯಾ...? ಪ್ಯಾನ್ ಇಂಡಿಯಾ ಸಿನಿಮಾ ಬಂದು ನಮ್ಮನ್ನ ಉದ್ದಾರ ಮಾಡಲ್ಲ. ಪ್ಯಾನ್ ಇಂಡಿಯಾದಿಂದ ನಮ್ಮ ಕನ್ನಡಿರಿಗೆ ಕೆಲಸ ಇಲ್ಲ. ಯಾರನ್ನೋ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಸಿನಿಮಾ ಮಾಡೋ ಹಾಗಿದೆ. ಇದರಿಂದ ನಮ್ಮ ನೆಲದ ಜನರಿಗೆ ಕೆಲಸ ಇಲ್ಲದಂತಾಗಿದೆ' ಎಂದು ನಟ ಜಗ್ಗೇಶ್ ಕಿಡಿ ಕಾರಿದ್ದಾರೆ.