ರಾಜ್ಯಬಿಜೆಪಿಗೆ ಬಿಸಿ ತುಪ್ಪವಾಗುತ್ತಿದೆಯೇ ಪಂಚಮಸಾಲಿಗಳ ಮುನಿಸು?
ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ 2 ಎ ಮೀಸಲಾತಿ ಬೇಡಿಕೆ ಪರಿಣಾಮ ಚುನಾವಣೆಗಳ ಫಲಿತಾಂಶಗಳ ಮೇಲೆ ಆಗುತ್ತಿದೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಇದು ಪಕ್ಷಕ್ಕೆ ಬಿಸಿ ತುಪ್ಪವಾಗುತ್ತಿದೆ ಎನ್ನುವ ಆತಂಕ ಬಿಜೆಪಿ ವಲಯದಲ್ಲಿ ಶುರುವಾಗಿದೆ.