panel

‘ಶೇ.40 ಕಮಿಷನ್’ ಹಗರಣ: ದೂರು, ದಾಖಲೆಗಳ ಸಲ್ಲಿಸುವಂತೆ ಸಾರ್ವಜನಿಕರಿಗೆ ಆಯೋಗ ಮನವಿ
ಗುತ್ತಿಗೆದಾರರ ಸಂಘ ಮಾಡಿರುವ ಶೇ.40 ರಷ್ಟು ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ನೇಮಿಸಿರುವ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗವು, ಹಗರಣ ಸಂಬಂಧ ದೂರು, ದಾಖಲೆಗಳಿದ್ದಲೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದೆ.

ಬ್ರ್ಯಾಂಡ್ ಬೆಂಗಳೂರು: 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಯನ್ನು ಕೂಡಲೇ ಸಲ್ಲಿಸಿ; ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ
‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಡಿ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಗಳನ್ನು ಕೂಡಲೇ ಸಲ್ಲಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಶುಕ್ರವಾರ ಸೂಚನೆ ನೀಡಿದೆ.

ಬಿಜೆಪಿ ಅವಧಿಯ ಬಿಬಿಎಂಪಿ ಕಾಮಗಾರಿಗಳ ಕುರಿತು ತನಿಖೆ: 4 ಪ್ರತ್ಯೇಕ ಸಮಿತಿ ರಚನೆ, 30 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಡಿಯಲ್ಲಿ 2019-20 ಮತ್ತು 2022-23 ರ ಹಣಕಾಸು ವರ್ಷಗಳ ನಡುವೆ ಅನುಷ್ಠಾನಗೊಂಡ ಯೋಜನೆಗಳು ಮತ್ತು ಕಾರ್ಯಕ್ರಮಗಳ ಸಂಪೂರ್ಣ ತನಿಖೆ ನಡೆಸಲು ಐಎಎಸ್ ಅಧಿಕಾರಿಗಳ ನೇತೃತ್ವದ 4 ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.

ಕಲ್ಲು ಗಣಿಗಾರಿಕೆ: ಸಮಿತಿ ರಚಿಸಿ 6105 ಕೋಟಿ ರೂ. ರಾಯಧನ, ದಂಡದ ಹಣ ವಸೂಲಿಗೆ ಸರ್ಕಾರ ಕ್ರಮ!
ಕಲ್ಲು ಗಣಿ ಗುತ್ತಿಗೆಗೆ ಅನುಮತಿ ಪಡೆದಿದ್ದ ಪ್ರದೇಶಕ್ಕಿಂತ ಹೆಚ್ಚು ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ಮಾಡಿರುವ ಕ್ವಾರಿ ಮಾಲೀಕರಿಗೆ ವಿಧಿಸಿರುವ 6105 ಕೋಟಿ ರು. ದಂಡವನ್ನು ಸಮಿತಿ ರಚನೆ ಮಾಡುವ ಮೂಲಕ ವಸೂಲು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಕನ್ನಡ ಹೋರಾಟಗಾರರು, ರೈತರ ವಿರುದ್ಧದ ಪ್ರಕರಣ ಹಿಂಪಡೆಯಲು ಸಂಪುಟ ಉಪ ಸಮಿತಿ ರಚನೆ: ಎಚ್.ಕೆ ಪಾಟೀಲ್
ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನ್ಯಾಯ ಮಂಡಳಿಗಳ ತೀರ್ಪು ಹಾಗೂ ಕಾನೂನುಬಾಹಿರವಾಗಿ ಅಮಾಯಕರ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣಗಳ ಪರಿಶೀಲಿಸಿ, ಹಿಂಪಡೆಯಲು ಸಂಪುಟ ಉಪ ಸಮಿತಿ ರಚಿಸಲು ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಪಘಾತಗಳ ಹೆಚ್ಚಳ: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣ ಅಧ್ಯಯನಕ್ಕೆ ಸಮಿತಿ ರಚನೆ
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ವೇಳೆ ಆಗಿರುವ ಲೋಪದೋಷಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಸರಿಪಡಿಸಲು ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸುವುದಾಗಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭರವಸೆ ನೀಡಿದ್ದಾರೆ.

ಪಠ್ಯಪುಸ್ತಕಗಳ ಪರಿಷ್ಕರಣೆಗೆ ಶೀಘ್ರದಲ್ಲೇ ಸಮಿತಿ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಕೈಗೊಳ್ಳಲು ಶೀಘ್ರದಲ್ಲೇ ಸಮಿತಿ ರಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದರು.

ತಾಲೂಕು-ಜಿಲ್ಲಾ ಪಂಚಾಯತ್ ಚುನಾವಣೆ: ಕಾಂಗ್ರೆಸ್ ನಿಂದ ಸಮಿತಿ ರಚನೆ
ರಾಜ್ಯದಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎದುರಿಸಲು ರಾಜ್ಯ ಕಾಂಗ್ರೆಸ್, ಸಚಿವ ಪ್ರಿಯಾಂಕ ಖರ್ಗೆ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವತಯಾರಿ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ.

ಸಲಿಂಗ ವಿವಾಹ: ಸಮಸ್ಯೆ ಪರಿಹರಿಸಲು ಸಮಿತಿ ರಚನೆ; ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ
ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಇರುವ ಸಮಸ್ಯೆಗಳ ಪರಿಹರಿಸಲು ಸಮಿತಿಯನ್ನು ರಚಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ ತಿಳಿಸಿದೆ.

