Parameshwar

ಹಿಜಾಬ್ ವಿವಾದ ಮತ್ತೆ ತಾರಕಕ್ಕೆ: ಕೇಸರಿ ಶಾಲು ತರುತ್ತೇವೆಂದು ಬಿಜೆಪಿ ಸವಾಲ್, ಗೊಂದಲ ಸೃಷ್ಟಿಸುವ ಅವಶ್ಯಕತೆಯಿಲ್ಲ ಎಂದ ಸರ್ಕಾರ
ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹಿಜಾಬ್ ಮತ್ತೆ ಜಾರಿಗೆ ಬಂದರೆ ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿ ಶಾಲೆಗೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಬಿಗಿ ಭದ್ರತೆ ನಿಯೋಜನೆಗೆ ಸೂಚನೆ
ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸುವಂತೆ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ.

ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಪ್ರೇಮಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದು- ರಾಜ್ಯ ಸರ್ಕಾರ
ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಪ್ರೀತಿಸಿ ಗ್ರಾಮ ಬಿಟ್ಟು ಹೋಗಿದ್ದ ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ನೀಡಲಾಗುವುದು ಗೃಹ ಸಚಿವ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.

ಹುಕ್ಕಾ ಬಾರ್ ನಿಯಂತ್ರಣಕ್ಕೆ ಶೀಘ್ರದಲ್ಲೇ ವಿಶೇಷ ಕಾನೂನು!
ಬಿಬಿಎಂಪಿ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ಗಳ ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ: ತನಿಖೆಗೆ ಸೂಚಿಸಲಾಗಿದೆ ಎಂದ ಗೃಹ ಸಚಿವ ಪರಮೇಶ್ವರ್
ಬಿಜೆಪಿ ಮುಖಂಡ ಪೃಥ್ವಿಸಿಂಗ್ ಅವರ ಮೇಲೆ ಹಲ್ಲೆ ನಡೆದ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಸೋಮಣ್ಣ, ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆ ಕುರಿತು ಗೃಹ ಸಚಿವ ಪರಮೇಶ್ವರ್ ಸುಳಿವು
ಬಿಜೆಪಿ ಮುಖಂಡರಾದ ವಿ.ಸೋಮಣ್ಣ, ಅರವಿಂದ ಲಿಂಬಾವಳಿ ಅವರ ಕಾಂಗ್ರೆಸ್ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಚರ್ಚೆ ನಡೆಯುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಗುರುವಾರ ಹೇಳಿದರು.

ಸಿದ್ದರಾಮಯ್ಯಗೆ ಬೇಡ ಎಂದರೆ ಪರಮೇಶ್ವರ ಮುಖ್ಯಮಂತ್ರಿ ಆಗಲಿ; ನಾನು ಯಾರಿಗೂ ಹೆದರಲ್ಲ, ಎಐಸಿಸಿಗೂ ಕೂಡ: ರಾಜಣ್ಣ
ಹಾಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಸಿಎಂ ಆಗಿ ಇರುವವರೆಗೆ ನಾವೆಲ್ಲ ಸಿದ್ದರಾಮಯ್ಯ ಪರ. ಸಿದ್ದರಾಮಯ್ಯ ಹೊರತು ಪಡಿಸಿದರೆ, ಪರಮೇಶ್ವರ್ ಅವರೇ ಸಿಎಂ ಆಗಬೇಕು ಎಂದು ಬಯಸುತ್ತೇವೆ.

ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ!
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಭರವಸೆ ನೀಡಿದರು.

