Parameshwara

ಪರಮೇಶ್ವರ್ ಪಿಎ ರಮೇಶ್'ನನ್ನು ವಿಚಾರಣೆಗೊಳಪಡಿಸಿಲ್ಲ: ಆರೋಪ ನಿರಾಕರಿಸಿದ ಐಟಿ ಅಧಿಕಾರಿಗಳು
ಐಟಿ ಅಧಿಕಾರಿಗಳ ಕಿರುಕುಳಕ್ಕೆ ಹೆದರಿಸಿ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಆರೋಪವನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಘಳು ತಿರಸ್ಕರಿಸಿದ್ದಾರೆ.

ಪರಮೇಶ್ವರ್ ಆಹ್ವಾನಿಸಿ 'ಕುರುಕ್ಷೇತ್ರ' ನಾಟಕ ಮಾಡುವ ಆಸೆಯಿಟ್ಟುಕೊಂಡಿದ್ದ: ಸ್ನೇಹಿತ ರಮೇಶ್ ನೆನೆದು ಕಣ್ಣೀರಿಟ್ಟ ಗೆಳೆಯ
ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಆಹ್ವಾನಿಸಿ ಹುಟ್ಟೂರಿನಲ್ಲಿ 'ಕುರುಕ್ಷೇತ್ರ' ನಾಟಕ ಮಾಡಬೇಕೆಂದು ಆಸೆ ಇಟ್ಟುಕೊಂಡಿದ್ದ ಎಂದು ತಮ್ಮ ಗೆಳೆಯ ರಮೇಶ್ ಅವರನ್ನು ಸ್ನೇಹಿತ ಪ್ರಕಾಶ್ ಅವರು ನೆನೆದು ಕಣ್ಣೀರು ಹಾಕಿದ್ದಾರೆ.

ವೈದ್ಯಕೀಯ ಸೀಟು ಹಂಚಿಕೆಯಲ್ಲಿ ಅಕ್ರಮ: ಪ್ರಕರಣ ಸಿಬಿಐ ವಶಕ್ಕೆ ನೀಡಲು ಐಟಿ ಚಿಂತನೆ
ವೈದ್ಯಕೀಯ ಸೀಟು ಹಂಚಿಕೆಯಲ್ಲಿ ಮೂರು ಕಾಲೇಜುಗಳಿಂದ ಅಕ್ರಮ ನಡೆದಿದ್ದು, ಪ್ರಕರಣವನ್ನು ಸಿಬಿಐ ವಶಕ್ಕೆ ನೀಡಲು ಆದಾಯ ತೆರಿಗೆ ಇಲಾಖೆ ಚಿಂತನೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಐಟಿ ದಾಳಿ ರಾಜಕೀಯ ಪ್ರೇರಿತ: ದೇವೇಗೌಡ
ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಸಚಿವ ಆರ್.ಎಲ್.ಜಾಲಪ್ಪ ನಿವಾಸಗಳು ಹಾಗೂ ಕಚೇರಿ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ.

ಮಾಜಿ ಡಿಸಿಎಂ ಪರಮೇಶ್ವರ್ ಮನೆಯಲ್ಲಿ 2ನೇ ದಿನವೂ ಮುಂದುವರಿದ ಐಟಿ ದಾಳಿ
ತೆರಿಗೆ ವಂಚನೆ, ಸಿದ್ದಾರ್ಥ ವೈದ್ಯ ಕಾಲೇಜಿನಲ್ಲಿ ನಿಯಮಬಾಹಿರ ಸೀಟು ಹಂಚಿಕೆ ಅಥವಾ ಮಾರಾಟ ಆರೋಪ ಸಂಬಂಧ ಎರಡನೇ ದಿನವೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಸದಾಶಿವನಗರದ ಮನೆ ಮತ್ತು ಅವರ ಅಣ್ಣನ ಮಗ ಆನಂದ್ ಮನೆಯಲ್ಲಿಯೂ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಐಟಿ ದಾಳಿ ಬಗ್ಗೆ ಗೊತ್ತಿರಲಿಲ್ಲ, ತಪ್ಪಿದ್ದರೆ ಸರಿಪಡಿಸಿಕೊಳ್ಳುತ್ತೇನೆ: ಜಿ ಪರಮೇಶ್ವರ್
ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಮಾಹಿತಿ ಇರಲಿಲ್ಲ. ನಮ್ಮಿಂದ ತಪ್ಪುಗಳಾಗಿದ್ದರೆ, ಅದನ್ನು ಸರಿಪಡಿಸಿಕೊಳ್ಳಲು ಸಿದ್ಧ ಎಂದು ಮಾಜಿ ಉಪಮುಖ್ಯಮಂತ್ರಿ ಜಿ,ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್'ಗೆ ವಿಪಕ್ಷ ನಾಯಕ ಸ್ಥಾನ?
8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ ಕಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡುವ ಎಲ್ಲಾ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸದ್ದಿಲ್ಲದೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದ ಪರಮೇಶ್ವರ್
ಅ.14ರಿಂದ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು, ಈ ನಡುವಲ್ಲೇ ವಿರೋಧ ಪಕ್ಷದ ನಾಯಕರು ಯಾರಾಗುತ್ತಾರೆಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಮುಂದುವರೆದಿದ್ದು, ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಬಿದ್ದ ಬಳಿಕ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.

ತುಮಕೂರು: ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೊ , ಹಲವು ಕಡೆಗಳಲ್ಲಿ ಭಿತ್ತಿಪತ್ರ
ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡರನ್ನು ತುಮಕೂರಿನಿಂದ ಚುನಾವಣೆಗೆ ನಿಲ್ಲಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ಹಲವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಇನ್ನೂ ಮಡಗಟ್ಟಿದೆ. ನಗರದ ಹಲವು ಕಡೆಗಳಲ್ಲಿ ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ ಎಂಬ ಭಿತ್ತಿಗಳನ್ನು ಅಂಟಿಸಲಾಗಿತ್ತು.

