Parameshwara

ಮಹಿಳೆ ಬೆತ್ತಲೆಗೊಳಿಸಿ, ಹಲ್ಲೆ ಪ್ರಕರಣ: ಸಂತ್ರಸ್ತೆ ಮನೆಗೆ ಗೃಹ ಸಚಿವ ಭೇಟಿ, 7 ಮಂದಿ ಬಂಧನ
ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ಸುಳ್ಳು ಸುದ್ದಿ ತಡೆಗೆ ಸರ್ಕಾರ ಮುಂದು: ಮುಂಬರುವ ಬೆಳಗಾವಿ ಚಳಿಗಾಲದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್‌ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸ್: ಗೊತ್ತಿಲ್ಲ ಎಂದ ಡಿಸಿಎಂ; ಕಾನೂನಿನ ಚೌಕಟ್ಟಿನೊಳಗೆ ನಿರ್ಧಾರ ಎಂದ ಸರ್ಕಾರ
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಈ ಬಗ್ಗೆ ವಿರೋಧ, ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

ಔರಾದ್ಕರ್ ವರದಿಯನ್ನು ಪುನರ್ ಪರಿಶೀಲನೆ ಮಾಡಲಾಗುವುದು: ಡಾ ಜಿ ಪರಮೇಶ್ವರ್
ರಾಘವೇಂದ್ರ ಔರಾದ್ಕರ್ ಸಮಿತಿಯ ಶಿಫಾರಸುಗಳ ಅನುಷ್ಠಾನವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಿಲ್ಲ. ವರದಿಯನ್ನು ಮರುಪರಿಶೀಲನೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ಸಿಎಂ ಸ್ಥಾನ ಖಾಲಿ ಇಲ್ಲ, ದಲಿತ ಸಿಎಂ ಕುರಿತು ಪ್ರಶ್ನೆ ಉದ್ಭವಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಹೀಗಾಗಿ ದಲಿತ ಸಿಎಂ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ ಹೇಳಿದರು.

ಬೆಂಗಳೂರು ಕೆಫೆ ಅಗ್ನಿ ಅವಘಡ ಪ್ರಕರಣ: ಸುರಕ್ಷತಾ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ- ಗೃಹ ಸಚಿವ ಡಾ. ಜಿ.ಪರಮೇಶ್ವರ್
ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸುರಕ್ಷತಾ ನಿಯಮಗಳ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಗಳ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ಗುರುವಾರ ಹೇಳಿದರು.

ಬೆಂಗಳೂರು ನಗರದಲ್ಲಿ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಡಾ ಜಿ ಪರಮೇಶ್ವರ್
ದೀಪಾವಳಿ ಸಮೀಪಿಸುತ್ತಿದ್ದು, ಅನಾಹುತ ತಡೆಗಟ್ಟಲು ಪಟಾಕಿ ನಿಷೇಧಕ್ಕೆ ಸಾಧಕ ಬಾಧಕ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು.

ಪೊಲೀಸರಿಗೆ ಸಿಪಿಆರ್ ತರಬೇತಿ ಕಡ್ಡಾಯ: ಸಚಿವ ಡಾ. ಜಿ.ಪರಮೇಶ್ವರ್
ರಾಜ್ಯದ ಎಲ್ಲಾ 12 ತರಬೇತಿ ಅಕಾಡೆಮಿಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಕಾರ್ಡಿಯೋಪಲ್ಮನರಿ ಪುನರುಜ್ಜೀವನ (ಸಿಪಿಆರ್) ತರಬೇತಿಯನ್ನು ಕಡ್ಡಾಯಗೊಳಿಸಲಾಗುವುದು. ಸಿಪಿಆರ್ ಶಿಕ್ಷಣವನ್ನು ಶಾಲಾ ಪಠ್ಯಕ್ರಮದ ಭಾಗವಾಗಿಸಲಾಗುವುದು’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು.

ಐಟಿಬಿಟಿ ಸಹಭಾಗಿತ್ವದಲ್ಲಿ 'ಸೈಬರ್‌ಸ್ಪೇರ್ ಸೆಂಟರ್ ಫಾರ್ ಎಕ್ಸ್‌ಲೆನ್ಸ್' ಕೇಂದ್ರ ರಚಿಸಲು ಚಿಂತನೆ: ಗೃಹ ಸಚಿವ
ಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್‌ಸ್ಪೇರ್ ಸೆಂಟರ್ ಫಾರ್ ಎಕ್ಸ್‌ಲೆನ್ಸ್ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಬುಧವಾರ ಹೇಳಿದರು.

