ರಾಜ್ಯಟ್ಯೂಷನ್ ಹೋಗಿ ನಾಪತ್ತೆಯಾಗಿದ್ದ ಬಾಲಕ ಪರಿಣವ್: ಹೈದರಾಬಾದ್ ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪತ್ತೆ
ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ 12 ವರ್ಷದ ಬಾಲಕ ಪರಿಣವ್ ಪ್ರಕರಣ ಕೊನೆಗೂ ಸುಖಾಂತ್ಯವಾಗಿದೆ. ಹೈದರಾಬಾದ್ ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದು ಬಾಲಕ ಸುರಕ್ಷಿತವಾಗಿದ್ದಾನೆ ಎಂದು ತಿಳಿಸಿದ್ದಾರೆ.