ರಾಜಕೀಯಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ: ಪಟ್ಟಿ ನೀಡಿ ಶಾ, ಮೋದಿ ವಿರುದ್ಧ ಹರಿಹಾಯ್ದ ಜೆಡಿಎಸ್!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ. ಕರ್ನಾಟಕಕ್ಕೆ ಬಂದಾಗೆಲ್ಲಾ ಕುಟುಂಬ ರಾಜಕಾರಣ ಎಂದು ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ.